ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹೆಣ್ಣಿನ ಆಸೆಗೆ ಬಿದ್ದು ಕೈದಿ ಬಿಡುಗಡೆ ಮಾಡಿದ್ದ ಡಿಐಜಿ ಸೋಮಶೇಖರ್?; ತನಿಖೆ ವೇಳೆ ಸ್ಫೋಟಕ ವಿಚಾರ ಬಯಲು!

DIG Somashekhar Case: ಸುಮಾರು ಎಂಟು ವರ್ಷಗಳ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. 2001ರಲ್ಲಿ ಅಪಹರಣ-ಸುಲಿಗೆ ಪ್ರಕರಣದಲ್ಲಿ ಶಂಕರ್‌ನನ್ನು ಬಂಧಿಸಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ ಆದೇಶದ ನಕಲಿ ದಾಖಲೆ ಸೃಷ್ಟಿ ಅಪರಾಧಿಯನ್ನು ಬಿಡುಗಡೆ ಮಾಡಿರುವುದು ಗೊತ್ತಾದ ಹಿನ್ನೆಲೆ ಜೈಲು ಡಿಐಜಿ ಸೋಮಶೇಖರ್ ಅವರನ್ನು ಬಂಧಿಸಲಾಗಿದೆ.

ಬೆಂಗಳೂರು: ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಬಿಡುಗಡೆ ಕೇಸ್‌ಗೆ ಸಂಬಂಧಿಸಿ ಬಂಧನವಾಗಿರುವ ಜೈಲು ಡಿಐಜಿ ಸೋಮಶೇಖರ್ (DIG Somashekhar) ಅವರನ್ನು ಪೊಲೀಸರು 9ನೇ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ಅಕ್ಟೋಬರ್ 9ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ಮತ್ತೊಂದೆಡೆ ಈ ಪ್ರಕರಣಕ್ಕೆ ಸಂಬಂಧಿಸಿ ಸ್ಫೋಟಕ ವಿಚಾರವೊಂದು ಬಹಿರಂಗವಾಗಿದೆ.

ಕೈದಿಯನ್ನು ಯಾವ ಕಾರಣಕ್ಕಾಗಿ ಡಿಐಜಿ ಸೋಮಶೇಖರ್ ಬಿಡುಗಡೆ ಮಾಡಿದ್ದರು ಎಂಬುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸ್‌ ಅಧಿಕಾರಿಯು ಹೆಣ್ಣಿನ ಆಸೆಗೆ ಬಿದ್ದು ಅಕ್ರಮವಾಗಿ ಕೈದಿ ಬಿಡುಗಡೆಗೆ ಷಡ್ಯಂತ್ರ ರೂಪಿಸಿದ್ದರು ಎನ್ನಲಾಗಿದೆ.

ಅಪರಾಧಿ ಶಂಕರ್ ಪತ್ನಿಯ ಜತೆ ಡಿಐಜಿ ಸೋಮಶೇಖರ್ ಮತ್ತು ಸಿಬ್ಬಂದಿ ಶ್ರೀಕಾಂತ್ ಲೈಂಗಿಕ ಸಂಬಂಧ ಬೆಳೆಸಿದ್ದರು ಎನ್ನುವ ಶಾಕಿಂಗ್ ವಿಚಾರ ಗೊತ್ತಾಗಿದೆ. ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಕೈದಿ ಶಂಕರ್ ಬಿಡುಗಡೆಗೆ ಅಧಿಕಾರಿ ಸಂಚು ರೂಪಿಸಿದ್ದರು ಎನ್ನಲಾಗಿದೆ. ಸದ್ಯ, ಅಕ್ರಮದಲ್ಲಿ ಡಿಐಜಿ ಸೋಮಶೇಖರ್ ಪಾತ್ರದ ಬಗ್ಗೆ ಕೈದಿ ಪತ್ನಿ ಒಪ್ಪಿಕೊಂಡಿದ್ದು, ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಇದೀಗ ಕೋರ್ಟ್‌ ಆದೇಶದ ಮೇರೆಗೆ ಕಾರಾಗೃಹ ಡಿಐಜಿ ಸೋಮಶೇಖರ್ ಅವರನ್ನು 5 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಕೃತ್ಯ ಬಯಲಾಗಿದ್ದು ಹೇಗೆ?

ಸುಮಾರು ಎಂಟು ವರ್ಷಗಳ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಶಂಕರ್ ಎಂಬಾತ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ. 2001ರಲ್ಲಿ ಅಪಹರಣ-ಸುಲಿಗೆ ಪ್ರಕರಣದಲ್ಲಿ ಶಂಕರ್‌ನನ್ನು ಬಂಧಿಸಲಾಗಿತ್ತು. ಈತನ ಮೇಲೆ ಐಪಿಸಿ ಸೆಕ್ಷನ್ 364 ಎ ಮತ್ತು 120 ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ ಜೀವಾವಧಿ ಶಿಕ್ಷೆಗೆ ನೀಡಿತ್ತು. ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಲು ಅಂದು ಕೋರ್ಟ್ ಆದೇಶ ಹೊರಡಿಸಿತ್ತು. ಶಿಕ್ಷೆ ಜೊತೆಗೆ ಅಪರಾಧಿಗೆ 5,000 ರೂಪಾಯಿ ದಂಡ ಸಹ ವಿಧಿಸಲಾಗಿತ್ತು.

2018ರಲ್ಲಿ ಜೈಲು ಅಧಿಕಾರಿಗಳಿಗೆ ಒಂದು ಪತ್ರ ಬಂದಿತ್ತು. ಅಪರಾಧಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಲಾಗಿದೆ. ಅದರಡಿ ಬಿಡುಗಡೆ ಆದೇಶ ನೀಡಲಾಗಿದೆ ಎಂದು ಪತ್ರದಲ್ಲಿ ಬರೆದಿತ್ತು. ಅದರಂತೆ ಡಿಸೆಂಬರ್ ಅಂತ್ಯಕ್ಕೆ ಆತ ಜೈಲಿನಿಂದ ಆತ ಅಕ್ರಮವಾಗಿ ಬಿಡುಗಡೆ ಆಗಿದ್ದ.

8 ವರ್ಷದ ಬಳಿಕ ಜೈಲು ಇಲಾಖೆಯ ಮಹಾನಿರ್ದೇಶಕರಿಗೆ ಅನಾಮಧೇಯ ಪತ್ರವೊಂದು ಬಂದಿದೆ. ಅದರಲ್ಲಿ ಶಂಕರ್ ಎಂಬಾತ ನಕಲಿ ಆದೇಶದ ದಾಖಲೆ ನೀಡಿ ಜೈಲಿಂದ ಪರಾರಿಯಾಗಿದ್ದ ಎಂಬ ಬಗ್ಗೆ ದೂರು ನೀಡಲಾಗಿತ್ತು. ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ್ದ ಜೈಲು ಇಲಾಖೆ ಆಂತರಿಕ ತನಿಖೆಗೆ ಆದೇಶಿಸಿತ್ತು. ಬಳಿಕ ಶಂಕರ್ ಹಾಗೂ ಆರೋಪಿ ಶ್ರೀಕಾಂತ್​ನ ಪೊಲೀಸರು ಅರೆಸ್ಟ್​ ಮಾಡಿದ್ದರು. ಇದೀಗ ಈ ಪ್ರಕರಣದಲ್ಲಿ ಕಾರಾಗೃಹ ಡಿಐಜಿ ಪಾತ್ರ ಬಯಲಾಗಿದೆ.