ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani Crime News: ಚಿಂತಾಮಣಿಯಲ್ಲಿ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ: ಚಿಕಿತ್ಸೆ ಫಲಿಸದೆ ಸಾವು

ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಮೀಪ ನಡೆದ ನವರಾತ್ರಿ ಉತ್ಸವ ವೀಕ್ಷಿಸಿ, ತರಕಾರಿ ಖರೀದಿಸಿ ಕೊಂಡು ಮಗಳು ವಿಷ್ಣುಪ್ರಿಯಳೊಂದಿಗೆ ರಾತ್ರಿ ಸುಮಾರು 8 ಗಂಟೆಗೆ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯೊಬ್ಬ ಜನಸಂದಣಿ ಕಡಿಮೆ ಇದ್ದ ರಸ್ತೆಯಲ್ಲಿ ಅವರನ್ನು ಅಡ್ಡಗಟ್ಟಿ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಚಿಂತಾಮಣಿಯಲ್ಲಿ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ

-

Profile
Ashok Nayak Oct 13, 2026 11:14 PM

ಚಿಂತಾಮಣಿ: ನವರಾತ್ರಿ ಉತ್ಸವ(Navaratri Utsava) ವೀಕ್ಷಿಸಿ ಮಗಳೊಂದಿಗೆ ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ನಗರದ ಫಿಲ್ಟರ್ ಬೆಡ್ ವೃತ್ತದ ಸಮೀಪದ ನಿವಾಸಿ ಸುಮಿತ್ರಮ್ಮ (35) ಮೃತಪಟ್ಟವರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಮೀಪ ನಡೆದ ನವರಾತ್ರಿ ಉತ್ಸವ ವೀಕ್ಷಿಸಿ, ತರಕಾರಿ ಖರೀದಿಸಿ ಕೊಂಡು ಮಗಳು ವಿಷ್ಣುಪ್ರಿಯಳೊಂದಿಗೆ ರಾತ್ರಿ ಸುಮಾರು 8 ಗಂಟೆಗೆ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ವ್ಯಕ್ತಿಯೊಬ್ಬ ಜನಸಂದಣಿ ಕಡಿಮೆ ಇದ್ದ ರಸ್ತೆಯಲ್ಲಿ ಅವರನ್ನು ಅಡ್ಡಗಟ್ಟಿ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Bagepally Crime: ಹಾಡಹಗಲೇ ವ್ಯಕ್ತಿಯ ಕತ್ತು ಕೊಯ್ದು ಕೊಲೆ: ಬಾಗೇಪಲ್ಲಿಯಲ್ಲಿ ಬೆಚ್ಚಿಬೀಳಿಸಿದ ಘಟನೆ; ಆರೋಪಿಗಳ ಪತ್ತೆಗೆ ಪೊಲೀಸರ ಶೋಧ

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ಸುಮಿತ್ರಮ್ಮ ರಸ್ತೆಯಲ್ಲಿ ಕುಸಿದುಬಿದ್ದಿದ್ದು, ಮಗಳ ಕೂಗಾಟ ಕೇಳಿ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಕೌಟುಂಬಿಕ ಹಿನ್ನೆಲೆ: ಸುಮಿತ್ರಮ್ಮ ಮತ್ತು ಅವರ ಮೊದಲ ಪತಿ ವೆಂಕಟರೆಡ್ಡಿ ನಡುವೆ ಕೌಟುಂ ಬಿಕ ಕಲಹ ಉಂಟಾಗಿದ್ದರಿಂದ ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ವಿಚ್ಛೇದನಕ್ಕೆ ಸಂಬಂ ಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ ಎನ್ನಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ಸುಮಿತ್ರಮ್ಮ ಕಾಪಲ್ಲಿ ಗ್ರಾಮದ ರಮೇಶ್ ಎಂಬುವವರನ್ನು ಎರಡನೇ ಮದುವೆಯಾಗಿದ್ದರು.

ಆಸ್ಪತ್ರೆಗೆ ಬಂದಿದ್ದ ಎರಡನೇ ಪತಿ ರಮೇಶ್ ಮಾತನಾಡಿ, ಮೊದಲ ಪತಿಯಿಂದ ಪ್ರತ್ಯೇಕವಾಗಿದ್ದ ಸುಮಿತ್ರಮ್ಮ ಒಂಟಿಯಾಗಿ ಬದುಕುವುದು ಕಷ್ಟವೆಂದು ತಿಳಿಸಿದ್ದರಿಂದ ತಾನು ಮದುವೆಯಾಗಿದ್ದೆ. ತನಗೆ ಯಾರ ಮೇಲೆಯೂ ಅನುಮಾನವಿಲ್ಲ. ಆದರೆ ಮೊದಲ ಪತಿ ವೆಂಕಟರೆಡ್ಡಿ ಮೇಲೆ ಮಗಳು ಅನುಮಾನ ವ್ಯಕ್ತಪಡಿಸುತ್ತಿದ್ದಾಳೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣದ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.0