ಕಾರವಾರ: ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಮರ ಬಿದ್ದು, ಕಾರಿನಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಪಿಕಳೆ ರಸ್ತೆಯಲ್ಲಿ ನಡೆದಿದೆ.
ಮೃತ ಮಹಿಳೆ ಮಲ್ಲಾಪುರ ಗ್ರಾಮದ ಲಕ್ಷ್ಮೀ ನಾರಾಯಣ ಮಮ್ತೆಕರ (55) ಎಂದು ಗುರುತಿಸಲಾಗಿದೆ. ಗರ್ಭಿಣಿ ಸೊಸೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಕೆಯ ಅತ್ತೆ ಲಕ್ಷ್ಮೀ ಮಮ್ತೆಕರ ಕಾರಿನೊಳಗೆ ಕುಳಿತುಕೊಂಡಿದ್ದರು. ಈ ವೇಳೆಗ ಬುಡ ಸಮೇತ ಬೃಹತ್ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ..
ಇದನ್ನೂ ಓದಿ: SIRA (Tumkur) News: ಎಲ್ಲಾ ಚೆಕ್ ಡ್ಯಾಮ್ ಹಾಗೂ ಕೆರೆಗಳು ತುಂಬುವ ವಿಶ್ವಾಸವಿದೆ
ಘಟನೆಯಿಂದಾಗಿ ಲಕ್ಷ್ಮೀ ಮಮ್ತೆಕರ ಕಾರಿನೊಳಗೆ ಸಿಲುಕಿದರು. ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಕಾರವಾರ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ಮರವನ್ನು ತೆರವುಗೊಳಿಸಿ ಗಾಯ ಗೊಂಡಿದ್ದ ಅವರನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ಮೃತಪಟ್ಟಿದ್ದಾರೆ, ಆಸ್ಪತ್ರೆಯಲ್ಲಿ ವೈದ್ಯರು ಸಾವನ್ನು ದೃಢಪಡಿಸಿದರು. ಕಾರವಾರದಲ್ಲಿ ಪದೆ ಪದೆ ಮರ ಉರುಳು ಬಿಳುವ ಘಟನೆ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ನಿಲ್ಲುವುದು, ವಾಹನ ನಿಲ್ಲಿಸು ವುದಕ್ಕೆ ಭಯ ಪಡುವಂತಾಗಿದೆ.