ಲಖನೌ, ಸೆ. 8: ಮಹಿಳಾ ಕಾನ್‌ಸ್ಟೇಬಲ್ ಒಬ್ಬರು ಕರ್ತವ್ಯದಲ್ಲಿದ್ದಾಗ ಸರ್ಕಾರಿ ರೈಫಲ್‌ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ. ಪ್ರಿಯಾಂಕಾ ಯಾದವ್ (25) ಮೃತ ಪೊಲೀಸ್ ಪೇದೆ. ಮಂಜನ್‌ಪುರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ದುರಂತ ಸಂಭವಿಸಿದೆ (crime news). ಗಾಯಗೊಂಡ ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಸತ್ಯನಾರಾಯಣ್ ಪ್ರಜಾಪತ್ ತಿಳಿಸಿದ್ದಾರೆ.
ಪ್ರಿಯಾಂಕಾ ಯಾದವ್ ಮಂಗಳವಾರ (ಸೆಪ್ಟೆಂಬರ್ 8) ಮುಂಜಾನೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ಈ ಘಟನೆ ಸಂಭವಿಸಿದಾಗ ಅವರು ಸರ್ಕಾರ ನೀಡಿದ್ದ ಇನ್ಸಾಸ್ ರೈಫಲ್ ಅನ್ನು ಹೊಂದಿದ್ದರು ಎಂದು ಎಸ್‌ಪಿ ಪ್ರಜಾಪತ್ ತಿಳಿಸಿದ್ದಾರೆ. ವಿಷಯ ತಿಳಿದ ತಕ್ಷಣ ಎಸ್‌ಪಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತಾ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಧಾವಿಸಿದ್ದು, ನಂತರ ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಮೃತಪಟ್ಟ ಮಹಿಳಾ ಪೊಲೀಸ್ ಸಿಬ್ಬಂದಿ:
ಘಟನಾ ಸ್ಥಳದಿಂದ ವಿಧಿವಿಜ್ಞಾನ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಾದವ್ ಅವರ ಮೊಬೈಲ್ ಫೋನ್ ಕೂಡ ಅಲ್ಲಿ ಪತ್ತೆಯಾಗಿದೆ. ಪ್ರಿಯಾಕಾ ಯಾದವ್ ಗಾಜಿಪುರ ಜಿಲ್ಲೆಯವರಾಗಿದ್ದು, ಅವರ ಸಾವಿನ ಬಗ್ಗೆ ಕುಟುಂಬಕ್ಕೆ ತಿಳಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ಪ್ರಜಾಪತ್ ಹೇಳಿದ್ದಾರೆ.
ಟಿಪ್ಪರ್ ಲಾರಿ ಹರಿದು 5 ವರ್ಷದ ಬಾಲಕ ಸಾವು; ತಾಯಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ದುರಂತ
ಘಟನೆಯನ್ನು ಎಲ್ಲ ಕೋನಗಳಿಂದಲೂ ತನಿಖೆ ಮಾಡಲು ಮಂಝನ್‌ಪುರ ಸರ್ಕಲ್ ಆಫೀಸರ್ ನೇತೃತ್ವದಲ್ಲಿ ಪೊಲೀಸ್ ತಂಡವನ್ನು ರಚಿಸಲಾಗಿದೆ. ಈ ತಂಡವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಿದೆ ಮತ್ತು ವಿವರವಾದ ವರದಿಯನ್ನು ಸಿದ್ಧಪಡಿಸುವ ಮುನ್ನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ತನಿಖಾ ವರದಿ ಬಂದ ನಂತರವಷ್ಟೇ ಸಾವಿಗೆ ನಿಖರವಾದ ಕಾರಣ ಏನೆಂಬುದು ಸ್ಪಷ್ಟವಾಗಲಿದೆ ಎಂದು ಅವರು ಹೇಳಿದ್ದಾರೆ.
ಪೇದೆಯ ಸಾವಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದು, ವಿಧಿವಿಜ್ಞಾನ ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ರೈಫಲ್‌ನಿಂದ ಆಕಸ್ಮಿಕವಾಗಿ ಗುಂಡು ಹಾರಿರುವ ಸಾಧ್ಯತೆ ಇದೆ.