ಯಾದಗಿರಿ: ಜಿಲ್ಲೆಯಲ್ಲಿ (Yadagiri news) ಒಂದು ಅಮಾನವೀಯ ಕೃತ್ಯ ನಡೆದಿದೆ. ಮಹಿಳೆಯೊಬ್ಬಳು ಅನೈತಿಕ ಸಂಬಂಧ (Illicit relationship) ಹೊಂದಿದ್ದಾಳೆ ಎಂದು ಆರೋಪಿಸಿ ಆಕೆಯನ್ನು ಸಾರ್ವಜನಿಕವಾಗಿ ನಗ್ನಗೊಳಿಸಿ, ತಲೆ ಬೋಳಿಸಿ, ಕಾರದ ಪುಡಿ ಎರಚಿ ಥಳಿಸಿ ಅಮಾನುಷವಾಗಿ ಹಲ್ಲೆ (Assault case) ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಚಾಮನಾಳ ತಾಂಡಾದಲ್ಲಿ ಈ ಭೀಕರ ಘಟನೆ ಅ.16ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಚಾಮನಾಳ ತಾಂಡಾ ನಿವಾಸಿ, 35ರ ಮಹಿಳೆ ದೌರ್ಜನ್ಯಕ್ಕೊಳಗಾದವರು. ಮಹಿಳೆಯು ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿಯಲ್ಲಿ ಇರುವ ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದರು. ಆಕೆಯ ಅಳಿಯ ಆಕೆಯನ್ನು ಕರೆದುಕೊಂಡು ಹೋಗುತ್ತಿದ್ದರು. ಅಳಿಯನ ಜೊತೆಗೆ ಅಕ್ರಮ ಸಂಬಂಧ ಇಟ್ಕೊಂಡಿದ್ದೀಯಾ ಎಂದು ಆರೋಪಿಗಳು ಅಪಾದಿಸಿ ಆಕೆಯನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿ: Viral News: ಅಬ್ಬಾ... ಈ ಕಾಲದಲ್ಲೂ ಇಂತಹ ವಿಕೃತಿ! ವೃದ್ಧನನ್ನು ದೇಗುಲದೊಳಗೆ ಮೂತ್ರ ನೆಕ್ಕಿಸಿ ಹಲ್ಲೆ
11 ಜನ ಹಲ್ಲೆಯಲ್ಲಿ ಭಾಗಿಯಾಗಿದ್ದಾರೆ. ಮಹಿಳೆಯನ್ನು ಒದ್ದು ನೆಲಕ್ಕೆ ಕೆಡವಿದ್ದಾರೆ. ಆಕೆಯನ್ನು ಹಿಡಿದು ತಲೆಕೂದಲನ್ನು ಕತ್ತರಿಯಿಂದ ಕತ್ತರಿಸಿದ್ದಾರೆ. ತಲೆಗೆ ಸುಣ್ಣ ಹಚ್ಚಿ, ಖಾರದ ಪುಡಿಯನ್ನು ಮೈಮೇಲೆ ಹಾಕಿದ್ದಾರೆ. ಬಟ್ಟೆ ಬಿಚ್ಚಿ ನಗ್ನಗೊಳಿಸಿದ್ದಾರೆ. ಜೊತೆಗೆ ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆಕೆಗೆ ಜೀವ ಬೆದರಿಕೆ ಕೂಡ ಹಾಕಲಾಗಿದೆ.
ಕೆಂಭಾವಿ ಪೋಲಿಸ್ ಠಾಣೆಯಲ್ಲಿ 11 ಜನರ ವಿರುದ್ಧ ಕೇಸ್ ದಾಖಲಾಗಿದೆ. ಕಸ್ತೂರಿಭಾಯಿ, ಡಾಕಪ್ಪ ಎಂಬಿಬ್ಬರನ್ನು ಬಂಧಿಸಲಾಗಿದೆ. ಇನ್ನುಳಿದ ಒಂಬತ್ತು ಜನ ಆರೋಪಿಗಳಾದ ವಿಜಯಕುಮಾರ್, ತಿಪ್ಪಣ್ಣ, ರಮೇಶ, ದೇವಿಭಾಯಿ, ತಿಪ್ಪಿಭಾಯಿ, ರೂಪ್ಲಿಭಾಯಿ, ಅನುಸೂಯಾ, ಚಾವಳಿಭಾಯಿ, ತಿಪ್ಪಣ್ಣ ನಾಯ್ಕ್ ಪರಾರಿಯಾಗಿದ್ದಾರೆ. ಮೊಬೈಲ್ ಸ್ವಿಚಾಫ್ ಮಾಡಿಕೊಂಡು ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೋಲಿಸರು ಹುಡುಕಾಡುತ್ತಿದ್ದಾರೆ.