ಮುಂಬೈ, ಡಿ. 15: ಕಾರಿನೊಳಗೆ ವ್ಯಕ್ತಿಯೊಬ್ಬ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಲಾತೂರ್ ಜಿಲ್ಲೆಯಲ್ಲಿ ನಡೆದಿದೆ. ಕೈಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ, ಸುಟ್ಟ ಯುವಕನ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮೃತನನ್ನು ಔಸಾ ತಾಂಡಾ ನಿವಾಸಿ ಗಣೇಶ್ ಚವ್ಹಾಣ್ ಎಂದು ಗುರುತಿಸಲಾಗಿದೆ. ಕೊಲೆಯಾದ ಗಣೇಶ್ ಅವರನ್ನು ಚೀಲದೊಳಗೆ ತುಂಬಿಸಿ, ಕಾರಿನಲ್ಲಿ ಕೂಡಿಡಲಾಗಿದೆ. ನಂತರ ದುಷ್ಕರ್ಮಿಗಳು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಲಾಗಿದೆ. ಚವ್ಹಾಣ್ ಐಸಿಐಸಿಐ ಬ್ಯಾಂಕ್‌ನಲ್ಲಿ ರಿಕವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅಪರಾಧ ಸ್ಥಳದಲ್ಲಿ ಪ್ರಾಥಮಿಕ ತನಿಖೆ ನಡೆಸಿ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
4 ವರ್ಷಗಳ ಬಳಿಕ ಹೈ ಪ್ರೊಫೈಲ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರು
ಕೊಲೆಗೆ ಕಾರಣವೇನಿರಬಹುದು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ದುರ್ದೈವಿಯ ಆಪ್ತರು ಆತನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು. ಆದರೆ ಯವಕನ ಫೋನ್ ಸ್ವಿಚ್ ಆಫ್ ಆಗಿತ್ತು. ಹುಡುಕಾಟ ನಡೆಸುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಮಧ್ಯರಾತ್ರಿ 12:30ರ ಸುಮಾರಿಗೆ ಸಹಾಯವಾಣಿ 112ಕ್ಕೆ ಕರೆ ಬಂತು. ವನವಾಡ ರಸ್ತೆಯಲ್ಲಿ ಕಾರು ಹೊತ್ತಿ ಉರಿಯುತ್ತಿದೆ ಎಂದು ಕರೆ ಮಾಡಿದವರು ತಿಳಿಸಿದರು. ನಮ್ಮ ಸಿಬ್ಬಂದಿ ಮತ್ತು ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ತಲುಪಿದರು. ನಂತರ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಅವರು ಬೆಂಕಿಯನ್ನು ನಂದಿಸಿದರು. ಈ ವೇಳೆ ಕಾರಿನೊಳಗೆ ಸುಟ್ಟ ದೇಹ ಪತ್ತೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ನಾವು ವೈದ್ಯಕೀಯ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿದ್ದೇವೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತ ಮಹಿಳೆಯ ಖಾಸಗಿ ಅಂಗದಲ್ಲಿ ಬಟ್ಟೆಯ ತುಂಡು ಪತ್ತೆ
ಪ್ರತ್ಯೇಕ ಪ್ರಕರಣವೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರದ ಬಿಧಾನು ಪೊಲೀಸ್ ಠಾಣೆ ವ್ಯಾಪ್ತಿಯ ಜಗದೀಶಪುರ ಗ್ರಾಮದಲ್ಲಿ 21 ವರ್ಷದ ಮಾನ್ಸಿ ಎಂಬ ಮಹಿಳೆಯ ನಿಗೂಢ ಮತ್ತು ದುರಂತ ಸಾವು ಇಡೀ ಪ್ರದೇಶದಾದ್ಯಂತ ಆಘಾತದ ಅಲೆಗಳನ್ನು ಎಬ್ಬಿಸಿದೆ. ಮೃತ ಮಹಿಳೆ ವಿವಾಹಿತಳಾಗಿದ್ದರೂ ಕಳೆದ ಆರು ತಿಂಗಳಿನಿಂದ ತನ್ನ ಪ್ರಿಯಕರ ಮನೀಶ್ ಯಾದವ್ ಜತೆ ತನ್ನ ಮನೆಯಲ್ಲಿ ವಾಸಿಸುತ್ತಿದ್ದಳು. ಆಕೆಯ ಸಾವಿನ ನಂತರ, ಕುಟುಂಬವು ಆರೋಪಿ ಪ್ರಿಯಕರನ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿದೆ.
ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು
ಮನೀಶ್ ಮೊದಲು ಮಾನ್ಸಿಯ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯ ಗುಪ್ತಾಂಗಗಳಿಗೆ ಬಟ್ಟೆಯ ತುಂಡುಗಳನ್ನು ತುರುಕಿದ್ದಾನೆ. ಈ ಅವಮಾನ ಮತ್ತು ನೋವಿನಿಂದ ಬೇಸತ್ತ ಮಾನ್ಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಈ ಸಂಬಂಧ ಮೃತಳ ತಂದೆ ಧರ್ಮವೀರ್, ಮನೀಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಪ್ರಸ್ತುತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮೃತಳ ತಂದೆಯ ದೂರಿನ ಆಧಾರದ ಮೇಲೆ ಮನೀಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕವಾಗಿ ಪ್ರಕರಣ ಆತ್ಮಹತ್ಯೆಯಂತೆ ಕಂಡುಬರುತ್ತಿದೆ, ಮೇಲ್ನೋಟಕ್ಕೆ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ. ಆದರೆ ಕುಟುಂಬದ ಆರೋಪಗಳ ಆಧಾರದ ಮೇಲೆ, ಮೂವರು ವೈದ್ಯರ ಸಮಿತಿಯು ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ. ಖಾಸಗಿ ಭಾಗಗಳಲ್ಲಿ ಬಟ್ಟೆಯ ತುಂಡುಗಳು ಕಂಡುಬಂದಿವೆ ಎಂದು ವರದಿಯಾಗಿದೆ. ಆರೋಪಿಯನ್ನು ಹುಡುಕಲು ಐದು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.