ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Self Harming: ರೈಲಿಗೆ ತಲೆಕೊಟ್ಟು ಯುವಕ ಸಾವಿಗೆ ಶರಣು

ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಮ್ಮನಾಯಕನಹಳ್ಳಿ ಗೇಟ್‌ನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿ ಹಿಂಭಾಗದ ರೈಲ್ವೆ ಹಳ್ಳಿ ಮೇಲೆ ಶನಿವಾರ ನಡೆದಿದೆ. ಮೃತಪಟ್ಟ ವ್ಯಕ್ತಿ ಅಪರಿಚಿತನಾಗಿದ್ದು, 30 ರಿಂದ 35 ವರ್ಷ ಆಗಿರಬಹುದು ಎಂದು ಅಂದಾ ಜಿಸಲಾಗಿದೆ.

ಚಿಕ್ಕಬಳ್ಳಾಪುರ: ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಮ್ಮನಾಯಕನಹಳ್ಳಿ ಗೇಟ್‌ನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿ ಹಿಂಭಾಗದ ರೈಲ್ವೆ ಹಳ್ಳಿ ಮೇಲೆ ಶನಿವಾರ ನಡೆದಿದೆ. ಮೃತಪಟ್ಟ ವ್ಯಕ್ತಿ ಅಪರಿಚಿತನಾಗಿದ್ದು, 30 ರಿಂದ 35 ವರ್ಷ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಚಿಕ್ಕಬಳ್ಳಾಪುರದಿಂದ ಶಿಡ್ಲಘಟ್ಟಕ್ಕೆ ಹೋಗುವ ರಸ್ತೆಯಲ್ಲಿರುವ ತಮ್ಮನಾಯಕನಹಳ್ಳಿ ಬಳಿ ಇರುವ ಗಾರ್ಮೆಂಟ್ಸ್ ಹಿಂಭಾಗ ಶನಿವಾರ ಬೆಳಗ್ಗೆ ಸುಮಾರು 11.30 ಸಮಯದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಮುಖದ ಮೇಲೆ ರೈಲ್ವೆ ಚಕ್ರಹರಿದ ಪರಿಣಾಮ ಮುಖವು ಗುರುತು ಸಿಗದ ಹಾಗೆ ಆಗಿದೆ.  

ಇನ್ನು ಈ ಘಟನೆ ಬಗ್ಗೆ ಸ್ಥಳೀಯರಲ್ಲಿ ಅನುಮಾನ ಮೂಡಿಸುವಂತಿದ್ದು ಇದು ಆತ್ಮಹತ್ಯೆ ಯೋ ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆಯ ನಂತರ ಗೊತ್ತಾಗಬೇಕಿದೆ. ಸ್ಥಳಕ್ಕೆ ರೈಲ್ವೇ  ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು ಶವವನ್ನು ಶವಾಗಾರಕ್ಕೆ ಸಾಗಿಸಿದ್ದಾರೆ ಎನ್ನಲಾಗಿದೆ.