ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Crime News: ಪೊಲೀಸ್ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲೇ ನಡೀತು ಯುವಕನ ಬರ್ಬರ ಹತ್ಯೆ

Man Killed by Five Attackers: ಪೊಲೀಸ್ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಗುಜರಾತ್‍ನ ಅಹಮದಾಬಾದ್‍ನಲ್ಲಿ ನಡೆದಿದೆ. ಈ ಸಂಪೂರ್ಣ ಭೀಕರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಾಲ್ಕರಿಂದ ಐದು ಮಂದಿ ಯುವಕರು ಈ ಕೃತ್ಯ ಎಸಗಿದ್ದಾರೆ.

ಅಹಮದಾಬಾದ್‌: ನಾಲ್ಕರಿಂದ ಐದು ಮಂದಿ ದುಷ್ಕರ್ಮಿಗಳ ಗುಂಪೊಂದು ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಗುಜರಾತ್‍ನ ಅಹಮದಾಬಾದ್‌ (Ahmedabad)ನಲ್ಲಿ ನಡೆದಿದೆ. ಈ ಘಟನೆ ಪಲ್ಡಿ ಪೊಲೀಸ್ ಠಾಣೆ (Police Station) ಯಿಂದ ಕೇವಲ 200 ಮೀಟರ್ ದೂರದಲ್ಲಿ ಈ ಘಟನೆ ನಡೆದಿರುವುದು ತೀವ್ರ ಕಳವಳಕಾರಿಯಾಗಿದೆ. ಈ ಸಂಪೂರ್ಣ ಭೀಕರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗುತ್ತಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ಕನಿಷ್ಠ 4 ರಿಂದ 5 ಜನರು ಆಯುಧಗಳಿಂದ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ದಾಳಿಯ ನಂತರವೂ ಅವರ ಕ್ರೌರ್ಯ ನಿಲ್ಲಲಿಲ್ಲ. ರಸ್ತೆಯಲ್ಲಿ ಬಿದ್ದ ಸಂತ್ರಸ್ತನ ಮೇಲೆಯೇ ಕಾರನ್ನು ಚಲಾಯಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ವಿಡಿಯೊ ಇಲ್ಲಿದೆ



ಸಹೋದ್ಯೋಗಿಯ ಕೊಲೆ ಪ್ರಕರಣ: ಯುವಕನ ಬಂಧನ

ಸಹೋದ್ಯೋಗಿಯೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಕೊಲೆ ಆರೋಪದ ಮೇಲೆ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 14 ರ ರಾತ್ರಿ ಗಾಂಧಿ ನಗರ ಕಾಲೋನಿಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು 35 ವರ್ಷದ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವನಾಗಿದ್ದು, ಉಮೇಶ್ ಮತ್ತು ರಾಜೇಶ್ ಎಂಬ ಇಬ್ಬರು ವ್ಯಕ್ತಿಗಳೊಂದಿಗೆ ಗುರುಗ್ರಾಮದಲ್ಲಿ ವಾಸಿಸುತ್ತಿದ್ದ. ಇವರು ಒಂದೇ ಕಡೆ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪಪ್ಪುವಿನ ಕಿರಿಯ ಸಹೋದರ ನೀಡಿದ ದೂರಿನ ಪ್ರಕಾರ, ಉಮೇಶ್ ಪಪ್ಪು ಜೊತೆ ಚೆಲ್ಲಿದ ಆಹಾರದ ಬಗ್ಗೆ ಜಗಳವಾಡಿದ್ದ. ರಾಜೇಶ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾನೆ. ನಂತರ ಪಪ್ಪು ಕಟ್ಟಡದ ಮೂರನೇ ಮಹಡಿಗೆ ಹೋದನು. ಉಮೇಶ್ ಅವನನ್ನು ಹಿಂಬಾಲಿಸಿ ಕೋಪದಿಂದ ತಳ್ಳಿದ್ದಾನೆ. ಪರಿಣಾಮವಾಗಿ ಮೇಲಿನಿಂದ ಕೆಳಗೆ ಬಿದ್ದು ಪಪ್ಪು ಮೃತಪಟ್ಟಿದ್ದಾನೆ.

ಇನ್ನು ದೂರಿನ ಮೇರೆಗೆ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಪಪ್ಪುವನ್ನು ಹತ್ಯೆ ಮಾಡಿದ 19 ವರ್ಷದ ಉಮೇಶ್ ಕುಮಾರ್‌ ಎಂಬಾತನನ್ನು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆಯ ಸಮಯದಲ್ಲಿ, ಆರೋಪಿಯು ಅಪರಾಧ ಮಾಡಿದ ನಂತರ ಪರಾರಿಯಾಗಿ ಉತ್ತರ ಪ್ರದೇಶ ಮತ್ತು ಬಿಹಾರದಾದ್ಯಂತ ವಿವಿಧ ಸ್ಥಳಗಳಲ್ಲಿ ಅಡಗಿಕೊಂಡಿದ್ದಾಗಿ ಬಹಿರಂಗಪಡಿಸಿದ್ದಾನೆ. ಆದರೆ ನಮ್ಮ ತಂಡವು ಅವನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ ಎಂದು ಗುರುಗ್ರಾಮ್ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ನನ್ನನ್ನೇ ಕಚ್ಚುತ್ತೀಯಾ?: ಕುಡಿದ ಮತ್ತಿನಲ್ಲಿ ಕುತ್ತಿಗೆಗೆ ಹಾವು ಸುತ್ತಿಕೊಂಡು ಹುಚ್ಚಾಟ ಮೆರೆದ ವ್ಯಕ್ತಿ