ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಯುವತಿ ನಿಗೂಢ ನಾಪತ್ತೆ; ಅಪಹರಣದ ಶಂಕೆ, ಇಬ್ಬರ ಮೇಲೆ ಅನುಮಾನ

ಮಗಳ ನಾಪತ್ತೆಯ ಹಿಂದೆ ಫಾಜಿಲ್ ಮತ್ತು ಜಾರಾ ಎಂಬುವವರ ಕೈವಾಡ ಇರಬಹುದು ಎಂದು ಪೋಷಕರು ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರ ಮೊಬೈಲ್ ಸಂಖ್ಯೆ ಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಗಳನ್ನು ಹುಡುಕುವಲ್ಲಿ ನಿರತರಾಗಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಲು ತಡವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

ಚಿಂತಾಮಣಿ: ತಾಲೂಕಿನ ಮುರಗಮಲ್ಲ ಗ್ರಾಮದ ಯುವತಿಯೊಬ್ಬಳು ನಿಗೂಢವಾಗಿ ನಾಪತ್ತೆ ಯಾಗಿರುವ ಘಟನೆ ಬೆಳಕಿಗೆ ಬಂದಿದೆ.ಮುರಗಮಲ್ಲ ಗ್ರಾಮದ ನಿವಾಸಿಯಾದ ತಸ್ಮಿಯಾ ಬಾನು ನಾಪತ್ತೆಯಾದ ಯುವತಿ.

ಮೇ 10 ರಂದು ಬೆಳಿಗ್ಗೆ ಸುಮಾರು 9 ಗಂಟೆಯ ಸಮಯದಲ್ಲಿ ತಸ್ಮಿಯಾ ಬಾನು ಮನೆಯಲ್ಲಿ ದ್ದರು. ತದನಂತರ ಬೆಳಿಗ್ಗೆ 10 ಗಂಟೆಗೆ ಅವರ ಪೋಷಕರು ಕೆಲಸಕ್ಕೆ ತೆರಳಿದ್ದರು. ಸಂಜೆ ಸುಮಾರು 5.30 ರ ವೇಳೆಗೆ ಪೋಷಕರು ಕೆಲಸ ಮುಗಿಸಿ ಮನೆಗೆ ವಾಪಸ್ ಬಂದಾಗ ಮಗಳು ಮನೆಯಲ್ಲಿ ಇಲ್ಲದಿರುವುದು ಕಂಡುಬಂದಿದೆ. ಇದರಿಂದ ಆತಂಕಗೊಂಡ ಪೋಷಕರು ಸುತ್ತಮುತ್ತಲಿನ ಮನೆಗಳು,ಇಡೀ ಗ್ರಾಮ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಯುವತಿಯ ಸುಳಿವು ಸಿಕ್ಕಿಲ್ಲ.

ಇದನ್ನೂ ಓದಿ: Chinthamani News: ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಈಜು ತರಬೇತಿ: ಡ್ಯಾನ್ಸ್ ಮಾಸ್ಟರ್ ಕೇಶವ ಅವರ ಸಾಮಾಜಿಕ ಕಳಕಳಿ

ಮಗಳ ನಾಪತ್ತೆಯ ಹಿಂದೆ ಫಾಜಿಲ್ ಮತ್ತು ಜಾರಾ ಎಂಬುವವರ ಕೈವಾಡ ಇರಬಹುದು ಎಂದು ಪೋಷಕರು ಬಲವಾದ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರ ಮೊಬೈಲ್ ಸಂಖ್ಯೆ ಗಳನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಮಗಳನ್ನು ಹುಡುಕುವಲ್ಲಿ ನಿರತರಾಗಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಲು ತಡವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

ಮೇ 14ರಂದು ಬೆಳಿಗ್ಗೆ 11 ಗಂಟೆಗೆ ಯುವತಿಯ ಪೋಷಕರು ಪೊಲೀಸ್ ಠಾಣೆಗೆ ಹಾಜರಾಗಿ ಅಧಿಕೃತ ವಾಗಿ ದೂರು ದಾಖಲಿಸಿದ್ದಾರೆ. ಕಾಣೆಯಾಗಿರುವ ಯುವತಿಯನ್ನು ಪತ್ತೆ ಹಚ್ಚಿ ಕೊಡುವಂತೆ ಪೋಷಕರು ಪೊಲೀಸರಲ್ಲಿ ಮನವಿ ಮಾಡಿದ್ದು, ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.