Crime News: ಮತ್ತೊಂದು ವೈಶಾಚಿಕ ಕೃತ್ಯ; ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
Young woman sexual assaulted: ದೇಶದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಕಾಳಜಿ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತವೆ. ಇದೀಗ ಒಡಿಶಾದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿತ ಅತ್ಯಾಚಾರವೆಸಗಲಾದ ಆಘಾತಕಾರಿ ಘಟನೆ ನಡೆದಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಶೋರೂಂ ಉದ್ಯೋಗಿಯೊಬ್ಬರಿಗೆ ಮೂವರು ಮುಸುಕುಧಾರಿಗಳು, ಸ್ಪ್ರೇ ಸಿಂಪಡಿಸಿ, ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿದ್ದಾರೆ. ಒಡಿಶಾದ ಸುಬರ್ಣಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ. ಶಂಕಿತರು ತಮ್ಮ ಗುರುತುಗಳನ್ನು ಮರೆಮಾಡಲು ಮಾಸ್ಕ್ ಧರಿಸಿದ್ದರಿಂದ, ಯುವತಿಗೆ ಅವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಸಂತ್ರಸ್ತೆಯು ಬಿರಾಮಹರಾಜಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ -
Priyanka P
Nov 1, 2025 8:40 PM
ಭುವನೇಶ್ವರ: ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಶೋರೂಂ ಉದ್ಯೋಗಿಯೊಬ್ಬರಿಗೆ ಮೂವರು ಮುಸುಕುಧಾರಿಗಳು ಮಾದಕ ದ್ರವ್ಯ ನೀಡಿ, ಎಳೆದಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಒಡಿಶಾದ (Odisha) ಸುಬರ್ಣಾಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ (Crime News). ಗುರುವಾರ ಈ ಘಟನೆ ನಡೆದಿದ್ದು, ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಆರೋಪಿಗಳು ಆಕೆಯ ಮುಖದ ಮೇಲೆ ಸ್ಪ್ರೇವೊಂದನ್ನು ಸಿಂಪಡಿಸಿದ್ದಾರೆ. ಆಕೆ ಪ್ರಜ್ಞೆ ಕಳೆದುಕೊಂಡಾಗ, ಆರೋಪಿಗಳು ಆಕೆಯನ್ನು ರಸ್ತೆಯ ಮೇಲೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬೀರಮಹರಾಜ್‌ಪುರ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (SDPO) ಹೇಮಂತ್ ರಾವ್ ತಿಳಿಸಿದ್ದಾರೆ.
ಶಂಕಿತರು ತಮ್ಮ ಗುರುತುಗಳನ್ನು ಮರೆಮಾಡಲು ಮಾಸ್ಕ್ ಧರಿಸಿದ್ದರಿಂದ, ಯುವತಿಗೆ ಅವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಶುಕ್ರವಾರ ಬೆಳಗ್ಗೆ ಪೊಲೀಸರು ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಮೂರನೇ ಆರೋಪಿಯನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮರುದಿನ ಬೆಳಗ್ಗೆ, ಪ್ರಜ್ಞೆ ಮರಳಿದ ನಂತರ ಸಂತ್ರಸ್ತೆಯು ಬಿರಾಮಹರಾಜಪುರ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದರು.
ಇದನ್ನೂ ಓದಿ: Crime News: ಕಾರಿನ ಮೇಲೆ ಮೂತ್ರ ವಿಸರ್ಜನೆ ಮಾಡದಂತೆ ಹೇಳಿದ್ದೇ ತಪ್ಪಾಯ್ತಾ? ಕೆನಾಡದಲ್ಲಿ ಭಾರತೀಯ ಮೂಲದ ಉದ್ಯಮಿಯ ಹತ್ಯೆ
ಬೀರಮಹರಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಕ್ರೂರ ಘಟನೆಯು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಆ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಸಾರ್ವಜನಿಕರು ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಆರೋಪಿಗಳು, ಯುವತಿಯನ್ನು ಅತ್ಯಾಚಾರ ಮಾಡಲು ಮೂರ್ಛೆ ಹೋಗುವ ಸ್ಪ್ರೇ ಬಳಸಿದ್ದಾರೆ. ಜತೆಗೆ ಮಾದಕ ದ್ರವ್ಯ ನೀಡಿದ್ದಾರೆ. ಆಕೆಯ ಪರಿಸ್ಥಿತಿಯ ಲಾಭ ಪಡೆದು ಈ ಹೇಯ ಕೃತ್ಯ ಎಸಗಿದ್ದಾರೆ.
ಘಟನೆ ಸಂಬಂಧ ಪೊಲೀಸರು ಅಗತ್ಯವಿರುವ ಎಲ್ಲ ಪುರಾವೆಗಳನ್ನು ಸಂಗ್ರಹಿಸುತ್ತಿದ್ದು, ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸುತ್ತಿದ್ದಾರೆ. ಯುವತಿಯು ಪ್ರಸ್ತುತ ವೈದ್ಯಕೀಯ ಆರೈಕೆಯಲ್ಲಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ದೂರಿನ ಪ್ರಕಾರ, ಸಂತ್ರಸ್ತೆ ತನ್ನ ಕಚೇರಿಯಿಂದ ಹಿಂತಿರುಗುತ್ತಿದ್ದರು. ಆಕೆಯ ದೂರಿನ ಆಧಾರದ ಮೇಲೆ ನಾವು ವಿಚಾರಣೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಇಬ್ಬರು ಶಂಕಿತರನ್ನು ಬಂಧಿಸಿದ್ದೇವೆ ಎಂದು ಅವರು ಹೇಳಿದರು. ಪ್ರಕರಣ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: Crime News: ಸೇನಾಧಿಕಾರಿಯಂತೆ ನಟಿಸಿ ವಂಚನೆ; ಮಾದಕ ದ್ರವ್ಯ ಸೇವಿಸಿ ವೈದ್ಯೆಯನ್ನು ಅತ್ಯಾಚಾರ!
ವೃದ್ಧೆಯ ಅತ್ಯಾಚಾರ, ಕೊಲೆ ಪ್ರಕರಣ: ಸರಿಯಾದ ಸಾಕ್ಷಿ ಇಲ್ಲ ಎಂದ ಸುಪ್ರೀಂ ಕೋರ್ಟ್
ಕೊಯಮತ್ತೂರಿನಲ್ಲಿ 2016ರಲ್ಲಿ ನಡೆದಿದ್ದ 85 ವರ್ಷದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ಸಾಕ್ಷಿ ಇಲ್ಲವೆಂದು ಸುಪ್ರೀಂ ಕೋರ್ಟ್ ಶಿಕ್ಷೆಗೆ ಒಳಗಾಗಿದ್ದ ಆರೋಪಿ ಮೊಹಮ್ಮದ್ ಸಮೀರ್ ಖಾನ್‌ನನ್ನು ಖುಲಾಸೆಗೊಳಿಸಿದೆ. ಆರೋಪಿಯ ಅಪರಾಧವನ್ನು ಸಾಬೀತುಗೊಳಿಸುವ ಸರಿಯಾದ ಸಾಕ್ಷಿಯನ್ನು ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಈ ಮೂಲಕ ಆರೋಪಿಯ ವಿರುದ್ಧ ವಿಚಾರಣಾ ನ್ಯಾಯಾಲಯವು ಪ್ರಕಟಿಸಿದ್ದ ಶಿಕ್ಷೆಯನ್ನು ಎತ್ತಿಹಿಡಿದಿದ್ದ ಮದ್ರಾಸ್ ಹೈಕೋರ್ಟ್‌ನ 2021ರ ತೀರ್ಪನ್ನು ನ್ಯಾಯಮೂರ್ತಿಗಳಾದ ದೀಪಂಕರ್ ದತ್ತ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ರದ್ದುಗೊಳಿಸಿದೆ.