ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hassan News: ಸ್ನೇಹಿತರ ಜತೆ ಟ್ರಿಪ್ ಹೋಗಿದ್ದ ಯುವತಿ ಹಾಸನದ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನ ನಾಗಸಂದ್ರದ ನಿವಾಸಿತಾದ ಯುವತಿ ಸ್ನೇಹಿತರ ಜತೆ ಟ್ರಿಪ್‌ಗೆಂದು ಹಾಸನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ: ಸ್ನೇಹಿತರ ಜತೆ ಟ್ರಿಪ್‌ ಹೋಗಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಾಸನ (Hassan) ಜಿಲ್ಲೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ವರ್ಷ (23) ಮೃತ ಯುವತಿ.

ಬೆಂಗಳೂರಿನ ನಾಗಸಂದ್ರದ ನಿವಾಸಿ ವರ್ಷ ಶುಕ್ರವಾರ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜತೆ ಟ್ರಿಪ್‌ಗೆಂದು ಬಂದಿದ್ದಳು. ಈ ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿ ಹಲವೆಡೆ ಸುತ್ತಾಡಿದ್ದರು. ಅಲ್ಲದೇ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ಮೂವರು ತಂಗಿದ್ದರು.

ಮಂಗಳವಾರ ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಮೃತಪಟ್ಟಿದ್ದಾಳೆ. ಕೂಡಲೇ ರಘು ಹಾಗೂ ದರ್ಶನ್ ವರ್ಷಳನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ಮೃತಪಟ್ಟ ಕುರಿತು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರಲ್ಲಿ ಭೀಕರ ಅಪಘಾತ; ಹಿಟ್ ಆ್ಯಂಡ್ ರನ್‌ಗೆ ನವದಂಪತಿ ದುರ್ಮರಣ!

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಟ್ ಆ್ಯಂಡ್ ರನ್ ಅಪಘಾತದಲ್ಲಿ ನವದಂಪತಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಬಳಿ ನಡೆದಿದೆ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ನಿವಾಸಿಗಳಾದ ದರ್ಶನ್ (25) ಹಾಗೂ ಉಷಾರಾಣಿ (21) ಮೃತರು.

ದಂಪತಿಗೆ ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಮಂಗಳವಾರದಂದು ಇಬ್ಬರೂ ಬೈಕ್‌ನಲ್ಲಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರ ದ್ವಾರಾಳು ಸೇತುವೆ ಮೇಲೆ ಅಪರಿಚಿತ ವಾಹನವೊಂದು ಇವರ ಬೈಕಿಗೆ ಭೀಕರವಾಗಿ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ಅಸದುದ್ದೀನ್ ಓವೈಸಿ ಬೆಂಗಾವಲು ಪಡೆಯ ವಾಹನ-ಬೈಕ್‌ಗಳ ನಡುವೆ ಡಿಕ್ಕಿ: ಹಲವರಿಗೆ ಗಾಯ

ಡಿಕ್ಕಿಯ ರಭಸಕ್ಕೆ ದರ್ಶನ್ ಸ್ಥಳದಲ್ಲೇ ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಉಷಾರಾಣಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಇಬ್ಬರೂ ಒಂದೇ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.