Thursday, 1st December 2022

ಸಿ.ಟಿ ರವಿ ಅವರಿಂದಲೇ ಸ್ವಾತಂತ್ರ್ಯ ಬಂದಿದೆ: ಡಿಕೆಶಿ ವ್ಯಂಗ್ಯ

ಬೆಂಗಳೂರು : ದೇಶಕ್ಕೆ ಸಿ.ಟಿ ರವಿ ಅವರಿಂದಲೇ ಸ್ವಾತಂತ್ರ್ಯ ಬಂದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬಿಜೆಪಿ ನಾಯಕರ ಕೊಡುಗೆ ಹೆಚ್ಚಾಗಿದೆ’ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಸಂಬಂಧಿಸಿ, ಮಾಧ್ಯಮದ ಪ್ರಶ್ನೆಗೆ ಶಿವಕು ಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿ ದರು. ಇನ್ನು ಕಾಂಗ್ರೆಸ್ ನಾಯಕರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಈಗಲೇ ನಿಮ್ಹಾನ್ಸ್ ಗೆ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತೇವೆ’ ಎಂದು ಟಾಂಗ್ ಕೊಟ್ಟರು.

ವಿನಯ್ ಕುಲಕರ್ಣಿ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವರಾಗಿದ್ದು, ಅವರು ಕಾಂಗ್ರೆಸ್ ನ ಭಾಗ. ವಿನಯ್ ಕುಲಕರ್ಣಿ ಅವರ ಮೇಲೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿರುವುದು ಸಂತೋಷ. ಆದರೆ, ಜನಾಶೀರ್ವಾದ ಯಾತ್ರೆ ಮೂಲಕ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವ ಕೇಂದ್ರ ಸಚಿವರ ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ. ಬಿಜೆಪಿ ಕಾರ್ಯಕರ್ತರ ಸಭೆ ಮಾಡಿದಾಗ ಯಾಕೆ ಪ್ರಕರಣ ದಾಖಲಿಸಿಲ್ಲ. ಸರ್ಕಾರ ತಮಗೆ ಬೇಕಾದ ರೀತಿಯಲ್ಲಿ ಕಾನೂನು ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಕಿಡಿಕಾರಿದರು.

ಇಡಿ ದಾಳಿ ವಿಚಾರವಾಗಿ ಶಾಸಕ ಜಮೀರ್ ಅಹ್ಮದ್ ಅವರು ಸ್ಪಷ್ಟನೆ ನೀಡಿದ್ದಾರೆ. ನಿರಪರಾಧಿಗಳಿಗೆ, ರಾಜಕೀಯ ದ್ವೇಷದ ದಾಳಿಗೆ ಒಳಗಾದವರಿಗೆ ನಾವು ಸ್ಪಂದಿಸಬೇಕು. ಅದನ್ನು ಮಾಡುತ್ತಿದ್ದೇವೆ’ ಎಂದರು.