Tuesday, 26th October 2021

ನಾಳೆಯಿಂದ ಸಚಿವ ಎಸ್.ಅಂಗಾರ ದ.ಕನ್ನಡ ಜಿಲ್ಲೆ ಪ್ರವಾಸ

ಮಂಗಳೂರು: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಇದೇ ಆ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಆ.30ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್ ರೋಡ್‌ನಲ್ಲಿರುವ ತಪೋವನ ಆರೋಗ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗ ವಹಿಸುವರು. 11 ಗಂಟೆಗೆ ತುಳು ಸಾಹಿತ್ಯ ಅಕಾಡಮಿಗೆ ಭೇಟಿ ನೀಡುವರು. ಮಧ್ಯಾಹ್ನ ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ ಸುಳ್ಯಕ್ಕೆ ತೆರಳಿ ವಾಸ್ತವ್ಯ ಮಾಡುವರು.

ಆ.31ರಂದು ಬೆಳಗ್ಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ಬಳ್ಪ ಟವರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗ ವಹಿಸುವರು. ಬಳಿಕ ಕಡಬದ ಅಂಬೇಡ್ಕರ್ ಭವನದಲ್ಲಿ ಅಕ್ರಮ ಸಕ್ರಮಗಳ ಬಗ್ಗೆ ಬೈಠಕ್ ನಡೆಸುವರು.

ಮಧ್ಯಾಹ್ನ ಸುಳ್ಯ ತಾಪಂನಲ್ಲಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಸುಳ್ಯ ತಾಪಂನಲ್ಲಿ ಅಕ್ರಮ-ಸಕ್ರಮಗಳ ಬೈಠಕ್ ನಡೆಸುವರು. ಸಂಜೆ ಸುಳ್ಯದಲ್ಲಿ ವಾಸ್ತವ್ಯ ಮಾಡುವರು.

ಸೆ.1ರಂದು ಬೆಳಗ್ಗೆ ಕಡಬ ತಾಲೂಕಿನ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಿ, ಮಧ್ಯಾಹ್ನ ಬಿಳಿನೆಲೆ ಗ್ರಾಮದ ಭಾಗ್ಯ ಕಾಂಕ್ರಿಟ್ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಸೆ.2ರಂದು ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸುಳ್ಯಕ್ಕೆ ತೆರಳಿ ವಾಸ್ತವ್ಯ ಮಾಡುವರು. ಸೆ.3ರಂದು ಬೆಳಗ್ಗೆ ಮಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯಿಂದ ಕೆಎಫ್ ಡಿಸಿಯ ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸುವರು. ಸಂಜೆ ಮಂಗಳೂರಿನಿಂದ ಸುಳ್ಯಕ್ಕೆ ರಸ್ತೆ ಮೂಲಕ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *