ಭವ್ಯ ಭಾರತದ ಇತಿಹಾಸ ಸಾರುತ್ತಿವೆ ಅಪರೂಪದ ನಾಣ್ಯಗಳು
ಒಂದು ದೇಶದ ಇತಿಹಾಸವನ್ನು ನಿರ್ಧರಿಸುವಲ್ಲಿ ಆ ಕಾಲದಲ್ಲಿ ಬಳಕೆಯಲ್ಲಿದ್ದ ನಾಣ್ಯಗಳೂ ಸಹ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತ ಭವ್ಯವಾದ ಪ್ರಾಚೀನ ಇತಿಹಾಸವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ವಿವಿಧ ಕಾಲ ಘಟ್ಟಗಳಲ್ಲಿ ಬಳಕೆಯಲ್ಲಿದ್ದ ಸುಮಾರು 1000 ನಾಣ್ಯಗಳ ಪ್ರದರ್ಶನವೊಂದು ಧರ್ಮಸ್ಥಳದಲ್ಲಿ ನಡೆಯುತ್ತಿದೆ.