ಪತ್ನಿಯ ಅಕಾಲಿಕ ಸಾವು; ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ
Davanagere News: ಪತ್ನಿಯನ್ನು ಅಪಾರವಾಗಿ ಪ್ರೀತಿಸುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಅಕಾಲಿಕ ಸಾವಿನಿಂದ ಆಘಾತಕ್ಕೊಳಗಾಗಿ ತನ್ನಿಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಉದಯ್ (35) ಈ ಕೃತ್ಯ ಎಸಗಿದಾತ. ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಮೃತರು.