ಮ್ಯಾಸರಹಳ್ಳಿ ಗ್ರಾಮದ ಹೊರವಲಯದಲ್ಲಿ ಮಹಿಳೆಯು ತೊಗರಿ ಹಾಕಿದ್ದರು. ಕಿರಣ್ ಹಾಗೂ ಪ್ರಭು ಮಹಿಳೆ ಯನ್ನು ಹೆದರಿಸಿ ಜಮೀನಿಗೆ ಕರೆದು ಕೊಂಡು ಹೋಗಿದ್ದಾರೆ. ಅಲ್ಲಿ ಅವರಿಬ್ಬರು ಮದ್ಯಪಾನ ಮಾಡಿದ್ದಾರೆ. ನಂತರ ಆಕೆಗೂ ಬಲವಂತವಾಗಿ ಕುಡಿಸಿದ್ದಾರೆ.
ಮಹಿಳೆಯ ಕೂಗಾಟ ಕೇಳಿದ ಸಂಬಂಧಿಯೊಬ್ಬರು ಸ್ಥಳಕ್ಕೆ ಆಗಮಿಸಿದ್ದಾರೆ. ಅಷ್ಟರಲ್ಲಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಜಮೀನಿನಲ್ಲಿ ಮಹಿಳೆ ಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಮಹಿಳೆಯ ಸಂಬಂಧಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕ ವಾಗಿದ್ದು, ಚಿಕಿತ್ಸೆ ಪಡೆಯು ತ್ತಿದ್ದಾರೆ.