ಚಿರತೆ ರಕ್ಷಣಾ ಕಾರ್ಯಾಚರಣೆ ವೇಳೆ ಅರಣ್ಯಾಧಿಕಾರಿ ಮೇಲೆ ದಾಳಿ: ಭಯಾನಕ ವಿಡಿಯೊ
Viral Video: ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಅಧಿಕಾರಿ ಮೇಲೆ ಚಿರತೆಯೊಂದು ದಾಳಿ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೆದ್ದಾರಿಯಲ್ಲಿ ಕಾರ್ ಡಿಕ್ಕಿ ಹೊಡೆದು ಚಿರತೆಯೊಂದು ಗಂಭೀರ ಗಾಯಗೊಂಡಿತ್ತು. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯನ್ನು ರಕ್ಷಿಸಲು ಕಾರ್ಯಾಚರಣೆ ಆರಂಭಿಸಿದರು. ಆದರೆ ಇದ್ದಕ್ಕಿದ್ದಂತೆ ಚಿರತೆ ಅರಣ್ಯ ಅಧಿಕಾರಿ ಮೇಲೆ ದಾಳಿ ಮಾಡಿದೆ.