Friday, 7th October 2022

ಕ್ಯಾಪಿಟಲ್ಸ್‌ ವಿರುದ್ದ ಗೆಲ್ಲುವುದೇ ರಾಯಲ್ಸ್‌ ?

ಮುಂಬೈ: ಮೊದಲ ಪಂದ್ಯದಲ್ಲಿ ಚೆನ್ನೈ ವಿರುದ್ದ ಅಧಿಕಾರಯುತ ಗೆಲುವು ದಾಖಲಿಸಿದ ನೂತನ ನಾಯಕ ರಿಷಬ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ಗುರುವಾರ ಮುಂಬೈನಲ್ಲಿ ಎದುರಿಸಲಿದೆ.

ರಾಜಸ್ಥಾನ ರಾಯಲ್ಸ್ ತಂಡ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಪೈಪೋಟಿ ನೀಡುವ ಮೂಲಕ ಕೇವಲ 4ರನ್ ಗಳಿಂದ ಸೋಲು ಕಂಡಿತ್ತು. ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅಂದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಏಕಾಂಗಿಯಾಗಿ ಹೋರಾಡಿದರು. ಸಂಜು ಸ್ಯಾಮ್ಸನ್ ಸೇರಿದಂತೆ ಜೋಸ್ ಬಟ್ಲರ್ ಹಾಗೂ ಬೆನ್ ಸ್ಟೋಕ್ಸ್ ರಂತಹ ಸ್ಫೋಟಕ ಬ್ಯಾಟ್ಸ್ ಮನ್ ಗಳು ಈ ತಂಡದಲ್ಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ ನಾಯಕನಾಗಿದ್ದು‌, ಈಗಾಗಲೇ ಮೊದಲ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಶುಭಾರಂಭ ಮಾಡಿದೆ. ಇಂದು ಎರಡು ತಂಡಗಳಿಂದ ರನ್ ಹೊಳೆ ಹರಿಯುವ ಸಾಧ್ಯತೆ ಹೆಚ್ಚಿದೆ.