Monday, 26th October 2020

ಕೋವಿಡ್ 19: ಡಿಸಿಎಂ ಕಾರಜೋಳ ಪುತ್ರನ ಆರೋಗ್ಯ ಚಿಂತಾಜನಕ

ಬೆಂಗಳೂರು: ಮುಧೋಳ ಶಾಸಕ, ಕರ್ನಾಟಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿ ದ್ದರೆ, ಅವರ ಪುತ್ರ ಡಾ.ಗೋಪಾಲ ಅವರಿಗೆ ಕೊರೊನಾ ಸೋಂಕು ಬಾಧಿಸುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರ ವಾಗಿದೆ ಎಂದು ತಿಳಿದುಬಂದಿದೆ.

ಡಿಸಿಎಂ ಕಾರಜೋಳ ಅವರ ಇಡೀ ಕುಟುಂಬ ಕೊವಿಡ್ 19 ಬಾಧಿತವಾಗಿತ್ತು. ಕಾರಜೋಳ ಇತ್ತೀಚೆಗಷ್ಟೇ ಗುಣಮುಖರಾಗಿದ್ದರು. ಇತ್ತೀಚೆಗೆ ಶಿರಾ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಗೋವಿಂದ ಕಾರಜೋಳ ಪಾಲ್ಗೊಂಡಿದ್ದರು.

ಕಾರಜೋಳ ಅವರ ಪುತ್ರ ಗೋಪಾಲ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳಿಂದ ವೆಂಟಿಲೇಟರ್ ಸಹಾಯದಿಂದ ಉಸಿರಾಟ ನಡೆಸುತ್ತಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಆರೋಗ್ಯದಲ್ಲಿ ಸುಧಾರಣೆ ಕಂಡು ಬಾರದ ಹಿನ್ನಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈ ಆಸ್ಪತ್ರೆಗೆ ಶಿಫ್ಟ್ ಮಾಡ ಲಾಗುತ್ತಿದೆ.

Leave a Reply

Your email address will not be published. Required fields are marked *