ರೈತರ ದೆಹಲಿ ಚಲೋ ಚಳುವಳಿ: ದೆಹಲಿಯಲ್ಲಿ ಮೆಟ್ರೋ ಸೇವೆ ರದ್ದು
ರೈತರ ದೆಹಲಿ ಚಲೋ ಚಳುವಳಿ: ದೆಹಲಿಯಲ್ಲಿ ಮೆಟ್ರೋ ಸೇವೆ ರದ್ದು

ನವದೆಹಲಿ: ಕೇಂದ್ರ ಸರ್ಕಾರ ನೂತನ ಕೃಷಿ ಮಸೂದೆ ವಿರೋಧಿಸಿ ರೈತರು ದೆಹಲಿ ಚಲೋ ಚಳುವಳಿ ಆರಂಭಿಸಿದ್ದು, ಪೊಲೀಸರು ಭಾರಿ ಭದ್ರತೆ ಒದಗಿಸಿದ್ದಾರೆ. ದೆಹಲಿಯಲ್ಲಿ ಮೆಟ್ರೋ ಸೇವೆ ರದ್ದುಗೊಳಿಸಲಾಗಿದೆ.
''ದೆಹಲಿ ಚಲೋ ಚಳವಳಿ'' ಭಾಗವಾಗಿ ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಪ್ರಸಂಗ ನಡೆದಿದೆ.
ರೈತರು ಗುಂಪು ಸೇರಿ ದೆಹಲಿ ಚಲೋ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಆಗ ಹರ್ಯಾಣ ಪೊಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದರು. ಪ್ರತಿಭಟನಾ ನಿರತ ರೈತರು ಗಗ್ಗರ್ ನದಿಗೆ ಎಸೆಯಲು ನೋಡಿದರು. ಕೆಲವರು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದರು. ಪ್ರತಿಭಟನಾಕಾರರು ದೆಹಲಿಗೆ ತೆರಳದಂತೆ ಹರ್ಯಾಣ ಪೊಲೀಸರು ಹಲವು ಹಂತಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು.
ದೆಹಲಿಯ ಯಾವುದೇ ನಗರದಲ್ಲಿ ಯಾವುದೇ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಗುರುಗ್ರಾಮ ಮತ್ತು ಫರೀದಾಬಾದ್ ಗಡಿ ಭಾಗಗಳಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ. ಮೆರವಣಿಗೆ ಹತ್ತಿಕ್ಕಲು ಜಲಫಿರಂಗಿ ಮತ್ತು ಗಲಭೆ ನಿಯಂತ್ರಕ ವಾಹನಗಳನ್ನು ನಿಯೋಜಿಸಲಾಗಿದೆ.