Sunday, 25th September 2022

ರಕ್ತದೋಕುಳಿಗೆ ಧೀರನ್‌ ಸಾಥ್‌

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಕ್ತದೋ ಕುಳಿ ಸಿನಿಮಾ ಟೀಸರ್ ರಿಲೀಸ್ ಆಗಿದೆ. ನಟ ಧಿರೇನ್ ರಾಮ್ ಕುಮಾರ್ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಎನ್.ಎನ್.ಜಾಕಿ ಈಡಿಗರ್ ನಿರ್ದೇಶನದಲ್ಲಿ ಮೂಡಿಬಂದಿರುವ ಚೊಚ್ಚಲ ಚಿತ್ರ ರಕ್ತ ದೋಕುಳಿ. ನಿರ್ದೇಶಕರೆ ಚಿತ್ರಕ್ಕೆ ಕಥೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಈ ಹಿಂದೆಯೇ ಸೆಟ್ಟೇರಿದ್ದ ರಕ್ತದೋಕುಳಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಅಂತಿಮ ಹಂತದ ಚಿತ್ರೀರಣ ನಡೆಯುತ್ತಿದೆ.

ಬೆಂಗಳೂರಿನ ಸ್ಲಂಗಳಲ್ಲಿ ನಡೆಯುವ ಕಥೆ ಚಿತ್ರದಲ್ಲಿದ್ದು, ಸ್ಲಂ ಹುಡುಗರು ಹೇಗೆ ಅಲ್ಲಿನ ವಾತಾವರಣದಿಂದ ಪ್ರೇರಿತರಾಗಿ ಅಡ್ಡದಾರಿ ಹಿಡಿಯುತ್ತಾರೆ. ತಪ್ಪು ದಾರಿ ಹಿಡಿದ ಮೇಲೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ ಎನ್ನುವುದನ್ನು ಚಿತ್ರದಲ್ಲಿ ಹೇಳಲಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬೇಡಿ ಎಂಬ ಸಂದೇಶವವೂ ಚಿತ್ರದಲ್ಲಿದೆ.

ಸಸ್ಪೆನ್ಸ್, ಆಕ್ಷನ್, ಥ್ರಿಲ್ಲರ್ ಜಾನರ್‌ನಲ್ಲಿ ಸಿನಿಮಾ ಸಾಗಲಿದ್ದು, ಪ್ರತಿ ಹಂತದಲ್ಲೂ ಪ್ರೇಕ್ಷಕರಿಗೆ ಥ್ರಿಲ್ ನೀಡುವ ಕಟೆಂಟ್ ಸಿನಿಮಾ ದಲ್ಲಿದೆ ಎನ್ನುತ್ತಾರೆ ನಿರ್ದೇಶಕ ಜಾಕಿ ಈಡಿಗರ್. ಇಡೀ ಸಿನಿಮಾ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಎಂ ನಾಗರಾಜು ಚಿತ್ರ ನಿರ್ಮಾಣಕ್ಕೆ ಬಂಡವಾಳ ಹೂಡಿದ್ದಾರೆ. ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಚಿತ್ರದಲ್ಲಿ ಪೊಲೀಸ್ ಪಾತ್ರದಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಲೋಕಿ ಸಾಹಿತ್ಯ, ಅನಿಲ್ ಸಿ ಜೆ ಸಂಗೀತ ನಿರ್ದೇಶನವಿದೆ. ರಂಗಸ್ವಾಮಿ ಎಲ್ ಛಾಯಾಗ್ರಹಣ, ಗಂಗಮ್ ರಾಜು ನೃತ್ಯ ನಿರ್ದೇಶನ, ಚಂದ್ರು ಬಂಡೆ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.