ಬಾಳಿಗೊಂದು ಗುರಿ ಇರಲಿ: ಶ್ರೀ ರಂಭಾಪುರಿ ಜಗದ್ಗುರು
ಭೂಮಿಯ ವ್ಯಾಸ ಇದ್ದಷ್ಟೇ ಇದೆ. ಆದರೆ ಮನುಷ್ಯನ ಹವ್ಯಾಸಗಳು ಮಾತ್ರ ಬೆಳೆಯುತ್ತಲೆ ಇವೆ. ದೈಹಿಕವಾಗಿ ನಾವೆಷ್ಟೇ ಸದೃಢವಾಗಿದ್ದರೂ ಮನಸ್ಸು ದೃಢವಾಗಿರದಿದ್ದರೆ ಯಾವ ಪ್ರಯೋಜನವು ಇಲ್ಲ. ಬೆಳೆಯುವ ಯುವ ಜನಾಂಗದಲ್ಲಿ ಕರ್ತವ್ಯಶೀಲತೆ ಮತ್ತು ಪ್ರಾಮಾಣಿಕತೆ ಬೆಳೆದು ಬರುವ ಅವಶ್ಯಕತೆಯಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.