ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿವಿ ಪ್ರಾಧ್ಯಾಪಕರಿಗೆ ಸ್ಥಾನ
Tumkur University: ಅಮೆರಿಕದ ಪ್ರತಿಷ್ಠಿತ ಸ್ಪ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯ ಮತ್ತು ಎಲ್ಸೆವಿಯರ್ ಸಂಸ್ಥೆ ಜಂಟಿಯಾಗಿ ಪ್ರಕಟಿಸಿರುವ 2026ನೇ ಸಾಲಿನ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್. ನಾಗಭೂಷಣ, ಸ್ನಾತಕೋತ್ತರ ಸಾವಯವ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಡಿ. ಸುರೇಶ್ ಹಾಗೂ ಭೌತಶಾಸ್ತ್ರ ವಿಭಾಗದ ಸಂಶೋಧನಾರ್ಥಿ ಡಾ. ರಾಧಾಕೃಷ್ಣ ಬಿ.ಆರ್., ಜೈವಿಕತಂತ್ರಜ್ಞಾನ ವಿಭಾಗದ ಸಂಶೋಧನಾರ್ಥಿ ಡಾ.ಕೆ. ಲಿಂಗರಾಜು ಆಯ್ಕೆಯಾಗಿದ್ದಾರೆ.