Sunday, 15th December 2024

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಒಟ್ಟು 17 ಆರೋಪಿಗಳ ಬಂಧನ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಇದುವರೆಗೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ್ ಹೇಳಿದರು.

ಪ್ರಕರಣದ ಬಗ್ಗೆಕೂಲಂಕಷವಾಗಿ ಎಲ್ಲಆಯಾಮಗಳಿಂದ ತನಿಖೆಯನ್ನ ನಡೆಸಲಾಗುತ್ತಿದೆ. ತನಿಖೆಯ ವಿವರಗಳನ್ನ ನಾವು ಸದ್ಯಕ್ಕೆ ಮಾಹಿತಿ ಕೊಡಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ಹೇಳಿದರು.

ಪ್ರಕರಣಕ್ಕೆ ಅಗತ್ಯ ಸಿಬ್ಬಂದಿ ಒದಗಿಸಲಾಗಿದ್ದು, ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ನಟ ದರ್ಶನ್ ನನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ವಿಚಾರಣೆಗೆ ಬೆಂಗಳೂರಿಗೆ ಕರೆತರಲಾಗಿತ್ತು. ಹೀಗೆ ಮುಂದುವರಿದ ವಿಚಾರಣೆ ಪವಿತ್ರಾಗೌಡ ಸೇರಿ ಇದುವರೆಗೂ 17 ಆರೋಪಿಗಳನ್ನು ಬಂಧಿಸಲಾಗಿದೆ.