Saturday, 14th December 2024

ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿ ಕುಣಿಗಳ್ಳಿಯಲ್ಲಿ ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ ರಾಗಿದ್ದಾರೆ.

ಸಂತೋಷ್ ಎಂಬವರು ಜು.18 ರಂದು ತಮ್ಮ ಮಗನ ಹುಟ್ಟುಹಬ್ಬದ ಹಿನ್ನೆಲೆ ಯಲ್ಲಿ ಚಿಕನ್ ಬಿರಿಯಾನಿ ಮಾಡಿಸಿದ್ದರು. ಬಿರಿಯಾನಿ ಮಾಡಿಸಿ ಸ್ನೇಹಿತರು, ಹಿತೈಷಿಗಳಿಗೆ ಆತಿಥ್ಯ ನೀಡಿದ್ದರು. ಮರುದಿನ ಜಮೀನಿಗೆ ಕಬ್ಬು ಕಟಾವಿಗೆ ಬಂದಿದ್ದ ಕಾರ್ಮಿಕ ರಿಗೆ ತಂಗಳು ಬಿರಿಯಾನಿ ನೀಡಿದ್ದರು.

ತಂಗಳು ಬಿರಿಯಾನಿ ಸೇವಿಸಿದ ಕಾರ್ಮಿಕರಿಗೆ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಕಾರ್ಮಿಕರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.