Wednesday, 11th December 2024

ಮಾ.18ಕ್ಕೆ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ: ದಿನೇಶ್ ಗುಂಡೂರಾವ್

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಬಿಜೆಪಿ ಮೊದಲ ಹಾಗೂ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದೂ, ಅಲ್ಲದೆ ಕಾಂಗ್ರೆಸ್ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ .

ಅಲ್ಲದೆ ಮಾ.18ಕ್ಕೆ ಕಾಂಗ್ರೆಸ್ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟೆ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಮಾರ್ಚ್ 18ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು. ಇನ್ನೂ ಇಂದು ದೆಹಲಿಯಲ್ಲಿ ಸಿಇಸಿ ಮೀಟಿಂಗ್ ಆಗಬೇಕು. ಹೀಗಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸ್ವಲ್ಪ ತಡವಾಗುತ್ತಿದೆ. ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆ ಆಗಬಹುದು ಎಂದು ತಿಳಿಸಿದರು.