Saturday, 14th December 2024

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಕಲಬುರಗಿ : ಜಿಲ್ಲೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲುಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗು ತ್ತಿದೆ. ಅಪಘಾತವಾದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮೃತರನ್ನು ಜಗನ್ನಾಥ (35), ಮೆಹಬೂಬ್ ಅಲಿ (45) ಹಾಗೂ ಶಾದಿಪುರ ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ.