Sunday, 27th October 2024

34 ಗಾಂಜಾ ಗಿಡಗಳು ವಶಕ್ಕೆ ಪಡೆದು ಒಬ್ಬನನ್ನು ಬಂಧಿಸಿದ ಪೊಲೀಸರು

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಂಗಾನಹಳ್ಳಿ ಗ್ರಾಮದಲ್ಲಿ ಘಟನೆ  

17 ಲಕ್ಷ 64 ಸಾವಿರ ರೂ ಬೆಲೆಬಾಳುವ ಗಾಂಜ ಗಿಡಗಳು

ಚಿಂತಾಮಣಿ: ಟೊಮ್ಯಾಟೊ ಗಿಡಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಬಂಧಿಸಿರುವ ಘಟನೆ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ.

ಆರೋಪಿಯನ್ನು ಗ್ರಾಮದ ಶ್ರೀನಿವಾಸ ಅಲಿಯಾಸ್ ಸೀನಪ್ಪ ಎಂದು ತಿಳಿದು ಬಂದಿದೆ.

ಟಮೋಟೋ ತೋಟದ ಒಳ ಭಾಗದಲ್ಲಿ ತೊಗರಿ ಗಿಡಗಳ ಮಧ್ಯದಲ್ಲಿ ಅಲ್ಲಲ್ಲಿ ಗಾಂಜಾಗಿಡಗಳನ್ನು ಬೆಳಸಿದ್ದು ಈ ವಿಚಾರವನ್ನು ಖಚಿತ ಮಾಹಿತಿ ಮೇರೆಗೆ ಜಿಲ್ಲಾ ರಕ್ಷಣಾಧಿಕಾರಿಗಳಾದ ಕುಶಾಲ್ ಚೌಕ್ಸೆ, ಅಡಿಷನಲ್ ಎಸ್ ಪಿ ರಾಜಾ ಐ.ಇಮಾಮ್ ಖಾಸಿಂ ,ಡಿವೈಎಸ್ಪಿ ಮುರಳಿಧರ್, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ನೇತೃತ್ವದ ತಂಡದ ಚನ್ನಕೇಶವ ಹಾಗೂ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ ಪೊಲೀಸರು ಗಾಂಜಾ ಗಿಡಗಳನ್ನು ಬೆಳೆಸಲು ಯಾವುದಾದರೂ ಪರವಾನಗಿ ಇದಿಯೇ ಎಂದು ವಿಚಾರಣೆ ನಡೆಸಿ ನಂತರ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.

ಇನ್ನೂ ಆರೋಪಿ ಬೆಳೆಸಿರುವ 34 ಗಾಂಜಾ ಗಿಡಗಳನ್ನು ಒಟ್ಟು ತೂಕ 44 ಕೆ.ಜಿ 12 ಗ್ರಾಂ ತೂಕವಿರುವ 1764800 ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬ0ಧಿಸಿದ0ತೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.