Thursday, 12th December 2024

ಫಾಜಿಲ್ ಹತ್ಯೆ: ನಾಲ್ವರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯ ವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಮಂಗಳೂರು ಪೊಲೀಸರು ಸತತ ಕಾರ್ಯಾಚರಣೆ ಬಳಿಕ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಪ್ರಮುಖ ಆರೋಪಿ ಗಳನ್ನು ತಡರಾತ್ರಿ ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.