Saturday, 27th July 2024

ಕಬಿನಿಯಲ್ಲಿ 48 ಕೋಟಿ ವೆಚ್ಚದಲ್ಲಿ ಉದ್ಯಾನವನ ನಿರ್ಮಾಣ: ಸಚಿವ ಎಸ್‌ಟಿಎಂ

ಮೈಸೂರು: ಮಂಡ್ಯದ ಕೆಆರ್‌ಎಸ್ ನಲ್ಲಿರುವ ಬೃಂದಾವನ ಉದ್ಯಾನದಂತೆ ಕಬಿನಿಯಲ್ಲೂ 48 ಕೋಟಿ ವೆಚ್ಚದಲ್ಲಿ ಉದ್ಯಾ ನವನ ನಿರ್ಮಿಸಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗುವುದು” ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮಂಗಳವಾರ ಹೆಚ್.ಡಿ.ಕೋಟೆ ತಾಲೂಕಿನ ಮೈಸೂರು ಗಡಿಭಾಗದಲ್ಲಿರುವ ಕಂಚಮಳ್ಳಿಯ ಹತ್ತಿರ ಸ್ವಾಗತ ಕಮಾನನ್ನು ಉದ್ಘಾ ಟಿಸಿ ಮಾತನಾಡಿ, ಹೆಚ್. ಡಿ. ಕೋಟೆ ಹೆಸರು ಕೇಳಿದ್ದರೂ ಇಲ್ಲಿನ ಪ್ರವಾಸೋದ್ಯಮ ವೈಶಿಷ್ಟ್ಯತೆಗಳು ತಿಳಿದಿರುವುದಿಲ್ಲ. ಈ ನಿಟ್ಟಿ ನಲ್ಲಿ ತಾಲೂಕಿನಲ್ಲಿರುವ ಪ್ರಕೃತಿ ಸಂಪತ್ತನ್ನು ಪರಿಚಯಸಲು ಸ್ವಾಗತ ಕಮಾನು ನೆರವಾಗಲಿದೆ” ಎಂದರು.

ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಒಂದು ಸೇತುವೆ ಹಾಗೂ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಅನು ಮೋದನೆ ದೊರಕಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಕಬಿನಿ ಜಲಾಶಯವಿದೆ. ಕಾವೇರಿ ನದಿಯ ಉಪನದಿ ಯಾಗಿರುವ ಕಬಿನಿ ತಿ.ನರಸೀಪುರದಲ್ಲಿ ಕಾವೇರಿ ನದಿಯನ್ನು ಸೇರುತ್ತದೆ.

 

Leave a Reply

Your email address will not be published. Required fields are marked *

error: Content is protected !!