Tuesday, 10th September 2024

ಡ್ರಗ್ ಪೆಡ್ಲರುಗಳ ವಿರುದ್ಧ ಕಾರ್ಯಾಚರಣೆ: ನಾಲ್ವರ ಬಂಧನ

ಬೆಂಗಳೂರು: ಸಿಸಿಬಿ ಪೊಲೀಸರು ಡ್ರಗ್ ಪೆಡ್ಲರುಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡು ಮೂವರು ವಿದೇಶಿ ಡ್ರಗ್ ಪೆಡ್ಲರುಗಳು ಸೇರಿದಂತೆ ನಾಲ್ವರನ್ನು ಬಂಧಿಸಿ, ಅವರುಗಳಿಂದ ಒಟ್ಟು 2.35 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 730 ಗ್ರಾಂ ಎಂ.ಡಿ.ಎಂಎ ಕ್ರಿಸ್ಟೆಲ್, 1273 ಎಕ್ಸ್ ಟಸಿ ಪಿಲ್ಸ್ ಗಳು, 42 ಗ್ರಾಂ ಹೈಡ್ರೋಗಾಂಜ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಇಬ್ಬರು ವಿದೇಶಿ ಡ್ರಗ್‍ ಪೆಡ್ಲರುಗಳು ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿ ದ್ದರು. ಒಬ್ಬ ಮೊದಲಿಗೆ ಮುಂಬೈನಲ್ಲಿ ನೆಲೆಸಿ ಎನ್‍ಡಿಪಿಎಸ್ ಪ್ರಕರಣದಲ್ಲಿ ಜೈಲಿನಲ್ಲಿದ್ದನು. ಈತನು ಜೈಲಿನಿಂದ ಬಿಡುಗಡೆಯಾದ ನಂತರ ನಗರಕ್ಕೆ ಬಂದು ಮತ್ತೊಬ್ಬ ವಿದೇಶಿ ಡ್ರಗ್‍ಪೆಡ್ಲರ್‍ನ ಜೊತೆಗೂಡಿ ಪರಿಚಯಸ್ಥ ಗಿರಾಕಿಗಳಿಗೆ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದುದ್ದು ತನಿಖೆಯಿಂದ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ 51 ಲಕ್ಷ ಮೌಲ್ಯದ 500 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 2 ಮೊಬೈಲ್ ಫೋನ್‍ಗಳು ಹಾಗೂ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳ ಲಾಗಿದೆ.

 

Leave a Reply

Your email address will not be published. Required fields are marked *