ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದೇಪಲ್ಲಿ ಕ್ರಾಸ್ ಬಳಿ ಘಟನೆ
ಚಿಂತಾಮಣಿ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿ ಮುನಿರೆಡ್ಡಿ,ಶ್ರೀನಿವಾಸ್(೨೮ ವರ್ಷ )ಇಬ್ಬರು ಚಿಂತಾಮಣಿ ಕಡೆಗೆ ಹೋಗುತ್ತಿದ್ದು, ಹಿಂಬದಿ ಯಿಂದ ಅತಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಹೋಗುತ್ತಿದ್ದಾಗ ರಸ್ತೆ ಮಧ್ಯದಲ್ಲೇ ದ್ವಿಚಕ್ರ ವಾಹನ ಸವಾರ ಶ್ರೀನಿವಾಸ್ ಮೃತಪಟ್ಟಿದ್ದಾನೆ.
ಚಿಂತಾಮಣಿ ತಾಲೂಕಿನ ಭೂಮಿಶೆಟ್ಟಹಳ್ಳಿ ಗ್ರಾಮದ ಶ್ರೀನಿವಾಸ ಎಂಬುವರೇ ಮೃತಪಟ್ಟ ವ್ಯಕ್ತಿಯಾಗಿದ್ದು,ಇನ್ನು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಮುನಿರೆಡ್ಡಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ವಿಷಯ ತಿಳಿದ ಕೂಡಲೇ ಕೆಂಚರ್ಲಹಳ್ಳಿ ಪೊಲೀಸ್ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.