Thursday, 12th December 2024

ಸರ್ಕಾರಿ ಬಸ್ ಅಪಘಾತ: 30ಕ್ಕೂ ಹೆಚ್ಚು ಜನರಿಗೆ ಗಾಯ

ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನ ಚೀರಹಳ್ಳಿ ಬಳಿ ಸರ್ಕಾರಿ ಬಸ್ ಗಳ ನಡುವೆ ಅಪಘಾತವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಹಾನಗಲ್ ತಾಲೂಕಿನ ಚೀರಹಳ್ಳಿ ಗ್ರಾಮದ ಬಳಿ ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್ ನಲ್ಲಿ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳು ಸೇರಿದಂತೆ 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಲೂಕು ಆಸ್ಪತ್ರೆಗೆ ಶಾಸಕ ಶ್ರೀನಿವಾಸ್ ಮಾನೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.