Saturday, 27th July 2024

ಅಪಘಾತದಿಂದ ಆತಂಕ ಸೃಷ್ಟಿ: ಮಾನವೀಯತೆ ಮೆರೆದ ಸಚಿವ ನಿರಾಣಿ

ಬೆಳಗಾವಿ: ಕಾರು ಮತ್ತು ಬಸ್ ನಡುವೆ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಬಹಳ ಆತಂಕಗೊಂಡಿದ್ದ ಪ್ರಯಾಣಿಕರ ಯೋಗ ಕ್ಷೇಮ ವಿಚಾರಿಸುವ ಮೂಲಕ ಸಚಿವ ಮುರುಗೇಶ್ ಆರ್.ನಿರಾಣಿ ಮಾನವೀಯತೆ ಮೆರೆದಿದ್ದಾರೆ.

ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಧ್ವಜರಾಹೋಣ ನೆರವೇರಿಸಲು ಯಾದಗಿರಿ ಜಿಲ್ಲೆಗೆ ನಿಯೋಜನೆಗೊಂಡಿರುವ ಸಚಿವ ನಿರಾಣಿ ಅವರು, ಬೆಳಗಾವಿ ರಸ್ತೆ ಮಾರ್ಗವಾಗಿ ಮುಧೋಳಕ್ಕೆ ತೆರಳುತ್ತಿದ್ದರು. ಈ ವೇಳೆ, ನೇಸರ್ಗಿ ಸಮೀಪ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅಪಘಾತವಾಗಿರುವುದನ್ನು ಕಂಡ ಕೂಡಲೇ ಸಚಿವರು ಕಾರು ನಿಲ್ಲಿಸಿ ಪ್ರಯಾಣಿಕರಿಗೆ ಆಗಿರುವ ಸಮಸ್ಯೆಯನ್ನು ಖುದ್ದು ವಿಚಾರಿಸಿ ಮಾನವೀಯತೆ ಕಾಳಜಿ, ಕಳಕಳಿ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾಹಿತಿ ನೀಡಿ ಖುದ್ದು ಅಂಬುಲೆನ್ಸ್ ತರುವ ವ್ಯವಸ್ಥೆ ಮಾಡಿ ಮಾನವೀಯತೆ ತೋರಿದರು.

ಸಚಿವರ ಈ ಕಳಕಳಿಗೆ ಪ್ರಯಾಣಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!