Thursday, 12th December 2024

Accident: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಐಮರೆಡ್ಡಿಹಳ್ಳಿ ಗೇಟ್ ಬಳಿ ಘಟನೆ  

ಪೊಲೀಸ್ ವಾಹನದಲ್ಲಿ ಗಾಯಾಳುಗಳನ್ನು ಸಾಗಿಸಿದ ಪೊಲೀಸರು

ಚಿಕ್ಕಬಳ್ಳಾಪುರ : ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ ಎರಡು ವರ್ಷದ ಮಗು ಒಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಐಮಾರೆಡ್ಡಿಹಳ್ಳಿ ಗೇಟ್ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೋಳ್ ಸಮೀಪದ ಆನಂದ ಆಶ್ರಮದಲ್ಲಿ ಕೆಲಸ ನಿರ್ವಹಿ ಸುವ ನಂದೀಶ್ ಎಂಬತ ತನ್ನ ದ್ವಿಚಕ್ರ ವಾಹನದಲ್ಲಿ ಚಿಂತಾಮಣಿ ತಾಲ್ಲೂಕಿನ ಐಮರೆಡ್ಡಿಹಳ್ಳಿ ಗ್ರಾಮಕ್ಕೆ ಕೆಲಸದ ನಿಮಿತ್ತ ಬರುತ್ತಿದ್ದ ಇದೇ ವೇಳೆ  ಚಿಂತಾಮಣಿ ಕಡೆಗೆ ಬರಲು ತಾಡಿಗೋಳ್ ಕ್ರಾಸ್ ಬಳಿ ಬಸ್ಸಿಗಾಗಿ ಕಾದುಕೊಂಡು ನಿಂತಿದ್ದ ಚಿಂತಾಮಣಿ ತಾಲೂಕಿನ ಕರಿಯಪಲ್ಲಿ ಗ್ರಾಮದ ನಾಗವೇಣಿ(೩೦ ವರ್ಷ)ಮತ್ತು ತಾಡಿಗೋಳ್ ಗ್ರಾಮದ ಆರತಿ (೨೮ವರ್ಷ)ತನ್ನ ಎರಡು ವರ್ಷದ ಮಗು ಜಯದೀಪ್ ರವರನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಚಿಂತಾಮಣಿ ಕಡೆಗೆ ಬರುತ್ತಿದ್ದ ವೇಳೆ ಆಂಧ್ರ ಕಡೆಯಿಂದ ಅತಿ ಜೋರಾಗಿ ಬಂದ ಕಾರು ಐಮರೆಡ್ಡಿಹಳ್ಳಿ ಗೇಟ್ ಬಳಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಮಗು ಸೇರಿ ದ್ವಿಚಕ್ರ ವಾಹನ ಸವಾರನು ಗಂಭೀರ ಗಾಯಗೊಂಡಿ ದ್ದಾನೆ.

ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು  ಅಂಬುಲೆನ್ಸ್ ವಾಹನ ಬರಲು ತಡವಾದ ಕಾರಣ ಪೊಲೀಸರು ಹೈವೇ ಪೆಟ್ರೋಲ್ ವಾಹನದಲ್ಲಿ ಗಾಯಾಳುಗಳನ್ನು ಸಾಗಿಸಿ  ಮಾನವೀಯತೆಯನ್ನು ಮೆರೆದಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಿಗೆ ರವಾನಿಸಲಾಗಿದೆ ಎಂದು ಗೊತ್ತಾಗಿದೆ.

ಘಟನೆ ಕುರಿತು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: Chikkaballapur_Dasara: ವೈದ್ಯ ಡಾ.ಬಿ.ವಿ.ಮಂಜುನಾಥ್ ಮನೆಯಲ್ಲಿ ೧೬ನೇ ವರ್ಷದ ದಸರಾ ಗೊಂಬೆಪೂಜೆ ಆರಾಧನೆ