Saturday, 14th December 2024

ಯುವಕರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ

ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಅತಿ ವೇಗವಾಗಿ ಬಂದ ಮಿನಿ ಗೂಡ್ಸ್ ವಾಹನ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಟಾಟಾ ಏಸ್ ವಾಹನ ರಸ್ತೆ ಬದಿ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಯುವಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದು, ಮತ್ತೋರ್ವ ಸ್ಥಿತಿ ಗಂಭೀರವಾಗಿದೆ. ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ಕೇಸ್​ ದಾಖಲಾಗಿದೆ.

ಅಬ್ರಹಾಂ, ಮಹಮ್ಮದ್ ಫಾರೂಖ್ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಮಹಮ್ಮದ್ ಸಿದ್ದಿಕ್ ಗಂಭೀರವಾಗಿ ಗಾಯಗೊಂಡಿ ದ್ದಾನೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹೆಗ್ಗನಹಳ್ಳಿ ಬಳಿ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕರಿಗೆ ವೇಗವಾಗಿ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ.

ವಾಹನ ಡಿಕ್ಕಿಯಾದ ನಂತರ ಟಾಟಾ ಏಸ್ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದು, ಮೃತ ಮೃತ ಫಾರೂಖ್ ಹಾಗೂ ಅಬ್ರಾರ್ ಸ್ಕ್ರಾಪ್ ಅಂಗಡಿಯಲ್ಲಿ ಕೆಲಸ ಮಾಡುತ್ತಾ ಪಿಯುಸಿ ವ್ಯಾಸಂಗ ಮಾಡುತ್ತಿದ್ದರಂತೆ. ರಂಜಾನ್ ಉಪವಾಸ ಮುಗಿಸಿ ತಂದೆ ಬಳಿ ಹಣ ಪಡೆದು ಚಪ್ಪಲಿ ಖರೀದಿಸಲು ಬಂದಿದ ವೇಳೆ ದುರ್ಘಟನೆ ನಡೆದಿದೆ.