Friday, 13th December 2024

ಕೊಲೆ ಪಾತಕಿಗಳಿಗೆ ಶಿಕ್ಷೆಯಾಗಲಿದೆ: ಕಾರಜೋಳ ವಿಶ್ವಾಸ

ವಿಜಯಪುರ : ಮಂಗಳೂರಿನಲ್ಲಿ ನಡೆದ ಹಿಂದೂ ಯುವಕರ ಕೊಲೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದ್ದು, ಕೊಲೆ ಪಾತಕಿಗಳಿಗೆ ಶಿಕ್ಷೆಯಾಗಲಿದೆ, ಯಾವುದೇ ಕಾರಣಕ್ಕೂ ಕೆಲ ಪಾತಕಿಗಳನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಜಲಸಂಪ ನ್ಮೂಲ ಸಚಿವ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಜನರಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಬಿಡಬೇಕು, ಆರ್ ಎಸ್ ಎಸ್ ದೇಶಭಕ್ತಿಯನ್ನು ಬಿತ್ತುವ ಕೆಲಸ ಮಾಡುತ್ತಿರುವ ದೇಶಭಕ್ತ ಸಂಘಟನೆ. ಕಾಂಗ್ರೆಸ್ ಪಕ್ಷ ಇಂತಹ ದೇಶ ಭಕ್ತಿ ಸಂಸ್ಥೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ, ಇದನ್ನು ಕಾಂಗ್ರೆಸ್ ಪಕ್ಷ ಬಿಡಬೇಕು ಎಂದು ವಾಗ್ದಾಳಿ ನಡೆಸಿದರು. ಆರ್.ಎಸ್.ಎಸ್. ಎನ್ನುವುದು ರಾಷ್ಟ್ರಸಂತರನ್ನು ಕಟ್ಟುವ ಸಂಘಟನೆ ಎಂದು ಸಮರ್ಥಿಸಿಕೊಂಡರು.

ಈ ಕೊಲೆಯನ್ನು ಖಂಡಿಸಿ ರಾಜೀನಾಮೆ ನೀಡುತ್ತಿರುವ ಪಕ್ಷದ ಪದಾಧಿಕಾರಿಗಳ ವಿಚಾ ರಕ್ಕೆ ಪ್ರತಿಕ್ರಿಯಿಸಿದ ಸಚಿವ ಗೋವಿಂದ ಕಾರಜೋಳ, ಅವರು ರಾಜೀನಾಮೆ ನೀಡುತ್ತಿರುವುದು ಸರಕಾರದ ವಿರುದ್ದ ಅಥವಾ ಪಕ್ಷದ ವಿರುದ್ಧ ಅಲ್ಲ, ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿ ರಾಜೀನಾಮೆ ನೀಡುತ್ತಿದ್ದಾರೆ. ದೇಶದ್ರೋಹಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವಕ್ಕೆ ನನಗೆ ಆಹ್ವಾನ ನೀಡಿಲ್ಲ, ಹೀಗಾಗಿ ಆ ಕಾರ್ಯಕ್ರಮಕ್ಕೆ ಹೋಗುವ ಪ್ರಮೇಯ ವೇ ಇಲ್ಲ ಎಂದು ಕಾರಜೋಳ ಸ್ಪಷ್ಟಪಡಿಸಿದರು. ಪಕ್ಷದ ವಿಚಾರವೇ ಬೇರೆ, ಅದನ್ನು ಹೊರತುಪಡಿಸಿ ಇರುವ ಗೆಳೆತನವೇ ಬೇರೆ ಎಂದು ಹಾಸ್ಯ ಚಟಾಕಿ ಹಾರಿಸಿದರು.