Monday, 14th October 2024

ಚಿಕ್ಕಬಳ್ಳಾಪುರ ನಗರದಲ್ಲಿ ಡಿಸೆಂಬರ್ ೧ ರಂದು ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ

ಚಿಕ್ಕಬಳ್ಳಾಪುರ: ಹೆಚ್.ಐ.ವಿ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ಡಿಸೆಂಬರ್ ೧ ರಂದು ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್ ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

೨೦೨೨ ನೇ ಸಾಲಿನಲ್ಲಿ ಸಮಾನಗೊಳಿಸು ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ಜಿಲ್ಲೆ ಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಸರ್ಕಾರದ ನಿರ್ದೇಶನದಂತೆ ಅರ್ಥಪೂರ್ಣವಾಗಿ ಆಚರಿಸಲು ಸಂಬAಧಪಟ್ಟ ಇಲಾಖೆಯ ಅಧಿಕಾರಿ ಗಳಿಗೆ ಕಾರ್ಯಹಂಚಿಕೆ ಮಾಡಿ ಜವಬ್ದಾರಿ ವಹಿಸಿದರು.

ಡಿಸೆಂಬರ್ ೧ ರಂದು ಬೆಳಿಗ್ಗೆ ೯:೩೦ ಗಂಟೆಗೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಿವಿಧ ಕಲಾ ತಂಡಗಳೊ0ದಿಗೆ ಮೆರವಣಿಗೆ ಕೈಗೊಂಡು ಸಾರ್ವ ಜನಿಕರಿಗೆ ಏಡ್ಸ್ ಜಾಗೃತಿ ಮೂಡಿಸಬೇಕು ಜೊತೆಗೆ ನಗರದ ಜೂನಿಯರ್ ಕಾಲೇಜು ಆವರಣ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಐ.ಇ.ಸಿ ಮಳಿಗೆ ಗಳನ್ನು ತೆರೆದು ಹೆಚ್.ಐ.ವಿ ಸೋಂಕನ್ನು  ಸಂಪೂರ್ಣವಾಗಿ ತಡೆಗಟ್ಟುವ ವಿಧಾನಗಳ ಕುರಿತು ಕರಪತ್ರಗಳು, ಭಿತ್ತಿಪತ್ರಗಳನ್ನು ಹಂಚು ವುದು ಹಾಗೂ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸಲು ಸಂಬ0ಧಪಟ್ಟ ಇಲಾಖೆಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಹೆಚ್.ಐ.ವಿ ಸೋಂಕಿಗೆ ಈವರೆಗೆ ಒಟ್ಟು ೫,೨೨೩ ಜನರು ಒಳಗಾಗಿದ್ದು ಈ ಪೈಕಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ೧,೦೩೩, ಚಿಂತಾಮಣಿ ತಾಲ್ಲೂಕಿನಲ್ಲಿ ೧,೧೬೯, ಬಾಗೇಪಲ್ಲಿ ತಾಲ್ಲೂಕಿನಲ್ಲಿ ೯೪೩, ಗೌರಿಬಿದನೂರು ತಾಲ್ಲೂಕಿನಲ್ಲಿ ೧,೦೨೧, ಗುಡಿಬಂಡೆ ತಾಲ್ಲೂಕಿನಲ್ಲಿ ೩೮೩ ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ೬೭೪ ಜನರು ಹೆಚ್.ಐ.ವಿ ಸೋಂಕಿಗೆ  ಒಳಗಾಗಿದ್ದಾರೆ. ಪ್ರಸ್ತುತ ೨,೭೯೭ ಸೋಂಕಿತರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಂಕಿತರಿ0ದ ಮತ್ತೊಬ್ಬರಿಗೆ ಸೋಂಕು ಹರಡದಂತೆ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಸೋಂಕಿತರಿಗೆ ಅರಿವು ನೀಡಲಾಗು ತ್ತಿದೆ. ಜೊತೆಗೆ ಮುನ್ನೇಚ್ಚರಿಕೆಯ ಕ್ರಮವಾಗಿ ಐ.ಇ.ಸಿ ಕಾರ್ಯಚಟುವಟಿಕೆಗಳ ಮೂಲಕ ಸೋಂಕು ಹರಡದಂತೆ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸೋಂಕಿತರಿಗೆ ಜಿಲ್ಲಾಧಿಕಾರಿಗಳು ಪೌಷ್ಠಿಕ ಆಹಾರ ಹಾಗೂ ಔಷಧಿ ಕಿಟ್ ಗಳನ್ನು ವಿತರಿಸಿದರು.

ಸಭೆಯಲ್ಲಿ ಚಿಕ್ಕಬಳ್ಳಾಪುರ ಸರ್ಕಾರಿ ವೈದ್ಯಕೀಯ ಕಾಲೇಜಿನ ಡೀನ್ ಮತ್ತು ನಿರ್ದೇಶಕ ಸಿದ್ಧೀಕ್ ಎಂ.ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಯಲ್ಲಾ ರಮೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯಯೋಜನಾಧಿಕಾರಿ ಎಂ.ಧನುರೇಣುಕ  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.