Tuesday, 10th September 2024

ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.

ಹಲವು ದಶಕಗಳಿಂದ ಗಡಿಯಲ್ಲಿ ಕನ್ನಡ ಕಟ್ಟುವ ಕೈಂಕರ್ಯ ತೊಟ್ಟಿದ್ದ ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಕನ್ನಡಪರ ಕಾರ್ಯಕ್ರಮಗಳ ಮೂಲಕ ನಾಡಿನ ಮನೆ ಮಾತಾಗಿದ್ದರು.

ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ಹಲವು ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಅಗಲಿಕೆ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಹಲವು ಸ್ವಾಮೀಜಿಗಳು, ಗಣ್ಯರು ದೌಡಾಯಿಸಿ‌ ದರ್ಶನ ಪಡೆದರು. ಸ್ವಾಮೀಜಿ ಅಗಲಿಕೆಯಿಂದ ಅವರ ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದು, ಚಿಂಚಣಿಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಹಲವು ಮಠಾಧೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *