ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ದಿ,ಕೋಲಾರ ಸಂಸದ ಎಂ ಮಲ್ಲೇಶ್ ಬಾಬು ಭಾಗಿ. ಜಿಲ್ಲಾಡಳಿತ ಹಾಗೂ ಸಚಿವರ ವಿರುದ್ದ ಆಕ್ರೋಶ
ಚಿಂತಾಮಣಿ : ಕಳೆದ ನಾಲ್ಕು ತಿಂಗಳಿಗೂ ಹೆಚ್ಚು ಕಾಲದಿಂದ ಭಾರತ ರತ್ನ,ಸಂವಿಧಾನ ಶಿಲ್ಪಿ,ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಕೊಳಕು ಬಟ್ಟೆಯನ್ನು ಸುತ್ತಿ ಅಪಮಾನ ಮಾಡುತ್ತಿರುವುದು ಖಂಡನೀಯವಾಗಿದ್ದು, ಕೂಡಲೇ ಜಿಲ್ಲಾಡಳಿತ ಹಾಗೂ ಸಚಿವರು ಅಂಬೇಡ್ಕರ್ ರವರಿಗೆ ಸುತ್ತಿರುವ ಕೊಳಕು ಬಟ್ಟೆಯನ್ನು ತೇರವು ಗೊಳಿಸಲು ಕ್ರಮಕೈಗೊಳ್ಳಬೇಕು, ಇಲ್ಲವಾದಲಿ ಈ ಹೋರಾಟ ಮತ್ತಷ್ಟು ಉಗ್ರರೂಪಕ್ಕೆ ಪಡೆಯಲಿದೆ ಎಂದು ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ದಿರವರು ಎಚ್ಚರಿಕೆ ನೀಡಿದ್ದಾರೆ.
ತಾಲೂಕು ಕಛೇರಿ ಬಳಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿರವರು ತಮ್ಮ ಆಪಾರ ಬೆಂಬಲಿಗರೊಂದಿಗೆ ಆಂಜನಿ ಬಡಾವಣೆಯಲ್ಲಿನ ತಮ್ಮ ಗೃಹಕಛೇರಿಯಿಂದ ಕಾಲ್ನಡಿಗೆ ಜಾಥಾ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ದಲಿತರ ಪರ ಸಂಘಟನೆಗಳ ಒಕ್ಕೂಟದ ಅನಿರ್ಧಿಷ್ಟಾವಧಿ ಧರಣಿಗೆ ಪ್ರತಿಭಟನೆಗೆ ಬೆಂಬಲ ನೀಡಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಚಿಂತಾಮಣಿ ನಗರದ ಸರಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಒಂದು ಸಂಘಟನೆಯವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಯನ್ನು ಪ್ರತಿಷ್ಟಾಪಿಸಿ ನಾಲ್ಕು ತಿಂಗಳಿಗೂ ಹೆಚ್ಚು ಕಾಲವಾಗಿದೆ. ನಾಲ್ಕು ತಿಂಗಳುಗಳಿAದ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಅಂಬೇಡ್ಕರ್ ರವರಿಗೆ ಸುತ್ತಿರುವ ಕೊಳಕು ಬಟ್ಟೆಯನ್ನು ತೇರುವುಗೊಳಿಸದಿರುವುದು ಅಂಬೇಡ್ಕರ್‌ಗೆ ಮಾಡಿದ ಅಪಮಾನವಾಗಿದೆ. ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಕಳೆದ ಒಂದು ವಾರದಿಂದ ಅಂಬೇಡ್ಕರ್ ರವರ ಪುತ್ಥಳಿಗೆ ಸುತ್ತಿರುವ ಕೊಳಕು ಬಟ್ಟೆಯನ್ನು ತೇರುವುಗೊಳಿಸುವಂತೆ ತಾಲೂಕು ಕಛೇರಿ ಬಳಿ ಅನಿರ್ಧಿಷ್ಟಾವಧಿ ಧರಣಿ ಮೂಲಕ ಹಲವಾರು ರೀತಿಯ ಪ್ರತಿಭಟನೆಗಳನ್ನು ಮಾಡುತ್ತಿದ್ದರು, ಸ್ಥಳಿಯ ಸಚಿವರು ಯಾವುದೇ ರೀತಿಯ ಕ್ರಮವನ್ನು ಕೈಗೊಳ್ಳದಿರುವುದು ಸರಿಯಲ್ಲ.
ಸಚಿವರು ಐದು ನಿಮಿಷಗಳ ಕಾಲ ಮನಸ್ಸು ಮಾಡಿ ದಲಿತ ಪರ ಸಂಘಟನೆಗಳೊAದಿಗೆ ಚರ್ಚಿಸಿ ಕೊಳಕು ಬಟ್ಟೆ ತೆರುವುಗೋಳಿಸಲು ಮುಂದಾದರೇ, ಸಚಿವರಿಗೆ ಒಳ್ಳೆಯ ಹೆಸರು ಬರುತ್ತಿದೆ ಹಾಗೂ ನಾವು ಕೂಡ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಅವರು ಅಂಭೇಡ್ಕರ್ ರವರ ಪ್ರತಿಮೆಗೆ ಸುತ್ತಿರುವ ಕೊಳಕು ಬಟ್ಟೆಯನ್ನು ತೆಗೆಯಲು ಮುಂದಾಗದಿದ್ದರೆ. ಈ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆಯಲಿದ್ದು, ಅನಿರ್ಧಿಷ್ಟಾವಧಿ ಧರಣಿಯಲ್ಲಿ ದಿನಕ್ಕೊಂದು ಗ್ರಾಮ ಪಂಚಾಯಿತಿ ನಮ್ಮ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.
ಕೋಲಾರ ಸಂಸದ ಎಂ ಮಲ್ಲೇಶ್ ಬಾಬು ಮಾತನಾಡಿ ಚಿಂತಾಮಣಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಸುತ್ತಿರುವ ಕೊಳಕು ಬಟ್ಟೆಯನ್ನು ತೆರುವುಗೊಳಿಸಲು ನಾಲ್ಕು ತಿಂಗಳುಗಳಿಂದ ಜಿಲ್ಲಾಡಳಿತದಿಂದ ಸಾಧ್ಯವಾಗದಿರುವುದು ನಾಚಿಕೇಗೇಡಿನ ಸಂಗತಿಯಾಗಿದೆ. ಸಚಿವರು ಕೂಡ ಐದು ನಿಮಿಷ ಮನಸ್ಸು ಮಾಡಿದ್ದರೆ ಈ ಪ್ರತಿಭಟನೆಗಳಿಗೆಲ್ಲಾ ಸುಖಾಂತ್ಯ ಹಾಡಬಹುದಾಗಿದೆ. ಆದರೆ ಸಚಿವರು ಯಾಕೋ ಮನಸ್ಸು ಮಾಡುತ್ತಿಲ್ಲ, ಅಂಬೇಡ್ಕರ್‌ರವರ ಪುತ್ಥಳಿಗೆ ಸುತ್ತಿರುವ ಕೊಳಕು ಬಟ್ಟೆಯನ್ನು ತೇರುವುಗೊಳಿಸಲು ತಾನೂ ಕೂಡ ಸಚಿವರ ಬಳಿ ಮಾತನಾಡುವುದಾಗಿ ತಿಳಿಸಿದ ಅವರು ಈ ವಿಷಯನ್ನು ಮುಂದೇ ನಡೆಯುವ ದಿಶಾ ಸಭೆಯಲ್ಲಿ ಮಾತನಾಡುವುದಾಗಿ ತಿಳಿಸಿದರು.
ಇನ್ನೂ ಪ್ರತಿಭಟನೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ನಗರಸಭಾ ಸದಸ್ಯರು, ದಲಿತ ಪರ ಸಂಘಟನೆಗಳ ಮುಖಂಡರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.