Sunday, 6th October 2024

ಜಿಲ್ಲೆಯಲ್ಲಿ ಎನಿವೇರ್ ವ್ಯವಸ್ಥೆ ಜಾರಿ: ೧೩೬೮ ದಸ್ತಾವೇಜು ನೋಂದಣಿ

ತುಮಕೂರು: ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯಲ್ಲಿಯೇ ದಸ್ತಾವೇಜನ್ನು ನೋಂದಣಿ ಮಾಡುವ ಸಲುವಾಗಿ ಜಾರಿಗೆ ತಂದಿರುವ ಎನಿವೇರ್ ನೋಂದಣಿ ವ್ಯವಸ್ಥೆಯಡಿ ಈವರೆಗೆ ಜಿಲ್ಲೆಯಲ್ಲಿ ೧೩೬೮ ದಸ್ತಾ ವೇಜುಗಳನ್ನು ನೋಂದಣ  ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎನಿವೇರ್ ನೋಂದಣಿ  ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ೨೦೧೧ ಹಾಗೂ ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ ೨೦೨೪ರಲ್ಲಿ ನೋಂದಣ  ಕಾಯ್ದೆ ೧೯೦೮ ಕಲಂ(೫) ಹಾಗೂ ಕಲಂ (೬) ರಡಿ ಜಾರಿಗೆ ತಂದು ಅನುಷ್ಠಾನಗೊಳಿಸಲಾಗಿದೆ. ಎನಿವೇರ್ ನೋಂದಣಿ  ವ್ಯವಸ್ಥೆಯು  ಜಿಲ್ಲೆಯಲ್ಲಿ ಜಾರಿಯಾದಾಗಿನಿಂದ ಈವರೆಗೆ ಒಟ್ಟು ೧೩೬೮ ದಸ್ತಾವೇಜುಗಳು ನೋಂದಣಿಯಾಗಿದ್ದು, ಎನಿವೇರ್ ನೋಂದಣ ಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಸರ್ಕಾರದಿಂದ ೨೦೨೪-೨೫ನೇ ಸಾಲಿನ ಆಯಾವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ  ವ್ಯವಸ್ಥೆಯನ್ನು ರಾಜ್ಯದಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದ್ದು,  ಎನಿವೇರ್ ನೋಂದಣಿ ವ್ಯವಸ್ಥೆಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಆಯಾ ಜಿಲ್ಲೆಯ ವ್ಯಾಪ್ತಿಯೊಳಗಿರುವ ಯಾವುದಾದರೂ ಉಪನೋಂದಣಿ  ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಎನಿವೇರ್ ನೋಂದಣ  ವ್ಯವಸ್ಥೆ ಜಾರಿಗೂ ಮುನ್ನ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣ  ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ  ಮಾಡಲು ಅವಕಾಶವಿತ್ತು.  ಪ್ರಸ್ತುತ ಸ್ಥಿರಾಸ್ತಿ ಇರುವ ಆಯಾ ಜಿಲ್ಲೆಯ ವ್ಯಾಪ್ತಿಯೊಳಗಿರುವ ಯಾವುದಾದರೂ ಉಪನೋಂದಣಿ  ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಎನಿವೇರ್ ನೋಂದಣಿ  ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿ ಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ  ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳ ಬಹುದಾಗಿದೆ.  ಇದರಿಂದ ನೋಂದಣ  ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವೂ ಸಹ ಉಳಿಯುತ್ತದೆ.  ಉಪನೋಂದಣಿ  ಕಚೇರಿಗಳಲ್ಲಿ ಜನದಟ್ಟಣೆ ಹಾಗೂ ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆ ಯಾಗುವುದರಿಂದ ನೋಂದಣಿ  ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮ್ಮ ಹತ್ತಿರದ ಅಥವಾ ನೋಂದಣಿ ಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.