Saturday, 27th July 2024

ಸ್ಟಾಫ್ ಸೆಲೆಕ್ಷನ್ ಕಮಿಷನ್: ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಸ್ಟಾಫ್ ಸೆಲೆಕ್ಷನ್ ಕಮಿಷನ್(ಎಸ್.ಎಸ್.ಸಿ) ವತಿಯಿಂದ ಶೀಘ್ರಲಿಪಿಗಾರ ಗ್ರೂಪ್ ‘ಸಿ’ ಮತ್ತು ‘ಡಿ’ ಹುದ್ದೆಗಳ ಭರ್ತಿಗೆ ಅರ್ಹ ಆಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು ಹಾಗೂ ಹಿಂದಿ ಅಥವಾ ಆಂಗ್ಲ ಭಾಷೆಯಲ್ಲಿ ಶೀಘ್ರಲಿಪಿಗಾರ ಸೀನಿಯರ್ ಪರೀಕ್ಷೆಯಲ್ಲಿ ಉತೀರ್ಣರಾಗಿರಬೇಕು. ಸಿ. ಗ್ರೂಪ್ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 30 ಮತ್ತು ಡಿ ಗ್ರೂಪ್ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18-27 ವಯೋ ಮಿತಿ ನಿಗದಿಗೊಳಿಸಲಾಗಿದ್ದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 100 ಪರೀಕ್ಷಾ ಶುಲ್ಕ ನಿಗದಿಪಡಿಸ ಲಾಗಿದ್ದು ಎಸ್.ಸಿ, ಎಸ್.ಎಟಿ, ಪಿಡಬ್ಲೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷಾ ಶುಲ್ಕ ಇರು ವುದಿಲ್ಲ.

ಪರೀಕ್ಷೆಯು 2021 ಮಾರ್ಚ್ 29 ರಿಂದ 31 ಮಾರ್ಚ್ ಅವಥಿಯೊಳಗೆ ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 04 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ SSC.gov.in ಅಥವಾ ದೂ.ಸಂ 08262-235513 ಅನ್ನು ಸಂಪರ್ಕಿ ಸುವಂತೆ ಚಿಕ್ಕಮಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!