ಕೊಪ್ಪಳ: ರಾಜಧಾನಿ ಬೆಂಗಳೂರಿನ ಕಾಡುಗೊಂಡನಹಳ್ಳಿ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್ಐ ಜಿಲ್ಲಾ ಅಧ್ಯಕ್ಷ ಅಬ್ದುಲ್ ಫಯಾಜ್ ಎಂಬುವರನ್ನು ಗಂಗಾವತಿ ಪೊಲೀಸರು ಬಂಧಿಸಿದ್ದಾರೆ.
ಗಂಗಾವತಿ ನಗರ ನಿವಾಸಿ ಅಬ್ದುಲ್ ಫಯಾಜ್‌ನನ್ನು ಗುರುವಾರ ಬೆಳಿಗ್ಗೆ ಬಂಧಿಸಲಾಗಿದೆ. ಬಳಿಕ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.