ತುಮಕೂರು: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದವತಿಯಿಂದ ಸಂಘದ ಅಮೃತ ಮಹೋತ್ಸವದ ಅಂಗವಾಗಿ ಈಡಿಗ ಮತ್ತು 25 ಪಂಗಡಗಳ ಬೃಹತ್ ಜಾಗೃತಿ ಸಮಾವೇಶವನ್ನು ಡಿಸೆಂಬರ್ 10ರ ಭಾನುವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೃಷವಿಹಾರ್‌ನಲ್ಲಿ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷರಾದ ಅಜಯಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಆರ್ಯ ಈಡಿಗರ ಅಭಿವೃದ್ದಿ ನಿಗಮಕ್ಕೆ ಅಧ್ಯಕ್ಷರ ನೇಮಕ ಹಾಗು 500 ಕೋಟಿ ರೂ ಅನುದಾನ ಬಿಡುಗಡೆ ಹಾಗೂ ತುಮಕೂರು ಜಿಲ್ಲೆಯ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಆರ್ಯ ಈಡಿಗರ ಹಾಸ್ಟಲ್ ನಿರ್ಮಾಣಕ್ಕೆ ಜಾಗ ನೀಡುವುದರ ಜೊತೆಗೆ ಅನುದಾನ ನೀಡಬೇಕೆಂಬುದು ಸಮಾವೇಶದ ಮೂಲ ಉದ್ದೇಶವಾಗಿದೆ ಎಂದರು.
ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ ಮಾತನಾಡಿ,ಅಧ್ಯಕ್ಷರು ಹೇಳಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಗಳಿಂದ ಸಮುದಾಯದ ಜನರು ಡಿಸೆಂಬರ್ 10ರ ಆರ್ಯ ಈಡಿಗರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳಲು ಬಸ್ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ಈಗಾಗಲೆ ಎಲ್ಲಾ ತಾಲೂಕುಗಳಲ್ಲಿಯೂ ಪ್ರವಾಸ ಮಾಡಿ,ಸಭೆಗಳನ್ನು ನಡೆಸಿ, ಜಾಗೃತಿ ಮೂಡಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಎಂ.ನಾಗರಾಜು, ವೆಂಕಟಸ್ವಾಮಿ, ಸಂಘಟನಾ ಕಾರ್ಯದರ್ಶಿ ನಾರಾಯಣಸ್ವಾಮಿ, ಜಿಲ್ಲಾ ನಿರ್ದೇಶಕರುಗಳಾದ ವೇದಮೂರ್ತಿ, ಕುಮಾರ್.ಎಂ., ಚಂದ್ರಕಲಾ, ಪುರುಷೋತ್ತಮ್ ಊರುಕೆರೆ, ರವೀಂದ್ರಕುಮಾರ್, ಎಲ್.ಐ.ಸಿ ನಾರಾಯಣ, ಶಿರಾಗೇಟ್ ನಾಗರಾಜು, ಲಕ್ಷಿö್ಮನಾರಾಯಣ ಮತ್ತಿತರರು ಉಪಸ್ಥಿತರಿದ್ದರು.