ತುಮಕೂರು: ಆಶಾ ಕಾರ್ಯಕರ್ತೆಯರಿಗೆ ಆರ್‌ಸಿಎಚ್ ಪೋರ್ಟಲ್ (ಆಶಾನಿಧಿ) ಮೂಲಕ ಪ್ರೋತ್ಸಾಹಧನ ನೀಡುವುದನ್ನು ರದ್ದುಪಡಿಸಿ, ರುಟೀನ್ ಕೆಲಸಗಳು ಮತ್ತು ಇತರ ನಿಗದಿತ ಚಟುವಟಿಕೆಗಳಿಗೆ ಕೇಂದ್ರ ಸರಕಾರ ನೀಡುತ್ತಿರುವ ಹಣವನ್ನು ಒಟ್ಟು ಗೂಡಿಸಿ ಮಾಸಿಕ ಗೌರವಧನ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಟೌನ್‌ಹಾಲ್ ವೃತ್ತದಲ್ಲಿ ಸಮಾವೇಶಗೊಂಡ ಆಶಾ ಕಾರ್ಯಕರ್ತೆಯರು ಜಿಲ್ಲಾಧಿ ಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ದರು.
ಆರ್‌ಸಿಹೆಚ್ (ಆಶಾ ನಿಧಿ) ಪೋರ್ಟಲ್‌ನಲ್ಲಿ ಇರುವ ಅಗಣಿತ ಸಮಸ್ಯೆಗಳ ಕಾರಣಗಳಿಂದ ಮಾಡಿದ ಹಲವಾರು ಚಟುವಟಿಕೆಗಳಿಗೆ ಹಣ ಬರುತ್ತಿಲ್ಲ ಎಂದು ಪುರಾವೆಗಳ ಸಹಿತ ಹಲ ವಾರು ವರ್ಷಗಳಿಂದ ಸರ್ಕಾರ, ಇಲಾಖೆಯಲ್ಲಿ ಪದೇ ಪದೇ ದೂರು ದಾಖಲಿಸಿದ ಮೇಲೆ ಸಂಘದ ರಾಜ್ಯ ಪದಾಧಿಕಾರಿಗಳೊಂದಿಗೆ ಉನ್ನತ ಅಧಿಕಾರಿಗಳು ನಡೆಸಿದ ಸಭೆಯಲ್ಲಿ ಸಮಸ್ಯೆ ಗುರುತಿಸಿದ ಮೇಲೆ ಭರವಸೆ ನೀಡಿದಂತೆ 2022ರ ಡಿಸೆಂಬರ್ ನಂತರ ಆರ್ ಸಿ ಹೆಚ್ ಪೋರ್ಟಲ್ ನಿಂದ ಪ್ರೋತ್ಸಾಹಧನ ಪಾವತಿ ಮಾಡುವುದನ್ನು ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿ ದರು.
ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ರು. 5000, ನಿಗದಿತ ರುಟೀನ್ ಚಟುವಟಿಕೆಗಳ ನಿಶ್ಚಿತ ಗೌರವಧನ ರು. 2000 ಮತ್ತು ಆಶಾ ನಿಧಿಯ ಮೂಲಕ ಪಡೆಯುವ ವಿವಿಧ ಚಟುವಟಿಕೆಗಳ ಪ್ರೋತ್ಸಾಹಧನ ಸರಾಸರಿ ರು. 5000 ಗಳನ್ನು ಒಟ್ಟುಗೂಡಿಸಿ ಮಾಸಿಕ ರು.12,000 ಒಂದೇ ಗೌರವಧನ ನಿಗದಿ ಮಾಡಿ ಪ್ರತಿ ತಿಂಗಳು ಪಾವತಿಸಬೇಕು ಎಂದು ಆಗ್ರಹಿಸಿದರು.
ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಲು ಸೂಕ್ತ ಆದೇಶ ಮಾಡಬೇಕು. ಆಶಾ ಸುಗಮಕಾರರನ್ನು ‘ಆಶಾ’ ದಿಂದ ಬೇರ್ಪಡಿಸಿ ಅವರ ಹುದ್ದೆಗೆ ತಕ್ಕಂತೆ ಮಾಸಿಕ ಗೌರವಧನ ಮತ್ತು ಪ್ರಯಾಣ ಭತ್ಯೆಗಳನ್ನು ನಿಗದಿ ಮಾಡಿ ಆದೇಶ ಹೊರಡಿಸಿ ನಗರ ಪ್ರದೇಶಗಳಿಗೂ ಸುಗಮಕಾರರನ್ನು ನೇಮಿಸಬೇಕು ಎಂದರು.
ಆಶಾ ಕ್ಷೇಮಾಭಿವೃದ್ದಿ ನಿಧಿ ಸ್ಥಾಪಿಸಿ, ತೀವ್ರ ಆರೋಗ್ಯ ತೊಂದರೆಗೊಳಗಾದ ಆಶಾಗಳಿಗೆ ಅನಾರೋಗ್ಯಕ್ಕೆ ಅನುಗುಣವಾಗಿ ಚೇತರಿಕೆಗೆ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
Read E-Paper click here