ತುಮಕೂರು: ಗುತ್ತಿಗೆದಾರ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಕಾಂಗ್ರೆಸ್ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಲ್ಲೆ ನಡೆದು 24 ಗಂಟೆಯ ನಂತರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಹಲ್ಲೆಗೊಳಗಾದ ರವಿಕುಮಾರ್ ಆಗ್ರಹಿಸಿದ್ದಾರೆ.
ಏನಿದು ಪ್ರಕರಣ???
ಟೆಂಡರ್‌ನಲ್ಲಿ ಅನ್ಯಾಯವಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಕಚೇರಿ ಮುಂಭಾಗ ಮಾರ್ಚ್ 14ರಂದು ರಾತ್ರಿ ರವಿಕುಮಾರ್ ಅರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು. ರಾತ್ರಿ 10.30ಕ್ಕೆ ಸ್ಥಳಕ್ಕೆ ಬಂದ ಶಾಸಕ ಶ್ರೀನಿವಾಸ್ ಮತ್ತು ಬೆಂಬಲಿಗರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ರವಿಕುಮಾರ್ ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನನ್ವಯ ಐಪಿಸಿ ಕಲಂ 506 (ಪ್ರಾಣ ಬೆದರಿಕೆ), 363 (ಅಪಹರಣ) ಹಾಗೂ ಇತರ ಕಲಂ ಅಡಿ ನಗರದ ತಿಲಕ್‌ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.