ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ಸಹಾಯಧನ, ರಾಜ್ಯದಲ್ಲಿ ಮೊದಲ ಬಾರಿಗೆ ರೈತರಿಗೆ ಜೀವವಿಮೆ ನೀಡುತ್ತೇವೆ, ರೈತರು ಆಕಸ್ಮಿಕ ವಾಗಿ ಮೃತಪಟ್ಟರೆ 2 ಲಕ್ಷ ರೂ ವಿಮೆ ನೀಡುತ್ತೇವೆ ಎಂದು ಮಾಜಿ ಸಿಎಂ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಬಿಜೆಪಿ 140 ಕ್ಕೂ ಹೆಚ್ಚು ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರಚಾರ ಮಾಡಲು ಬರುತ್ತಿದ್ದಾರೆ. ರಾಹುಲ್ ಗಾಂಧಿ ಪ್ರಚಾರ ಮಾಡಿದ್ರೆ ಬಿಜೆಪಿಯವರಿಗೆ ಹೆಚ್ಚು ಸೀಟು ಗೆಲ್ಲುವುದಕ್ಕೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ ಮುಂದೆ ರಾಹುಲ್ ಗಾಂಧಿ ಯಾವ ಲೆಕ್ಕ. ರಾಹುಲ್ ಗಾಂಧಿ ಪ್ರಚಾರದಿಂದ ಯಾವುದೇ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.