Wednesday, 23rd October 2024

Chikkaballapur News: ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅನನ್ಯ:ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮ

ಬಾಗೇಪಲ್ಲಿ: ಮಾನವ ಜಗತ್ತಿಗೆ ಮೊಟ್ಟ ಮೊದಲಿಗೆ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿದವರು ಕವಿ ವಾಲ್ಮೀಕಿ ಎಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಿ.ರಾಮಸುಬ್ಬಮ್ಮ ಹೇಳಿದರು.

ಅವರು ಬಾಗೇಪಲ್ಲಿ ಕಸಬಾ ಹೋಬಳಿ ಸರ್ಕಾರಿ ಪ್ರೌಢಶಾಲೆ ಘಂಟಂವಾರಿಪಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ, ಪೂಜೆ ಸಲ್ಲಿಸಿ  ಮಾತನಾಡಿದರು

ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ಸ್ಮರಿಸಿಕೊಂಡು ಗೌರವ ಸಲ್ಲಿಸುವ ಮತ್ತು ಕಾವ್ಯದ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸುವ ಹಿನ್ನಲೆಯಲ್ಲಿ ಪ್ರತಿ ವರ್ಷವು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಹೇಳಿದರು.

ಸಹ ಶಿಕ್ಷಕ ಕೆ.ಬಿ.ಆಂಜನೇಯ ರೆಡ್ಡಿ ಮಾತನಾಡಿ, ಬೇಟೆಗಾರನ ಬದುಕು ಪರಿವರ್ತನೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ದೊಡ್ಡ ಸಾಧಕರಾದರು. ರಾಮಾಯಣದಂತಹ ಗ್ರಂಥವನ್ನು ರಚಿಸಿದರು. ಅವರಿಗೆ ಗೌರವ ಸಲ್ಲಿಸಲು ಜಯಂತಿಯನ್ನು  ಆಚರಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕ ಜಿ.ವಿ.ಚಂದ್ರಶೇಖರ, ಸಿ.ನಾರಾಯಣ ಸ್ವಾಮಿ,  ಸಿಬ್ಬಂದಿ ವರ್ಗ ರಾಮಚಂದ್ರಪ್ಪ ಹಾಜರಿದ್ದರು.

ಇದನ್ನೂ ಓದಿ: Chikkaballapur News: ಒಳಮೀಸಲಾತಿಗೆ ಆಗ್ರಹಿಸಿ ಜಿಲ್ಲಾಡಳಿತ ಎದುರು ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ