Monday, 9th December 2024

Chikkaballapur: ವಾಲ್ಮೀಕಿ ಮಹರ್ಷಿ ಜೀವನ ಮೌಲ್ಯ, ತತ್ವಗಳು ಎಲ್ಲ ಕಾಲಕ್ಕೂ ಪ್ರಸ್ತುತ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ: ಸತತ ಪರಿಶ್ರಮ, ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡಿದ್ದು, ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಅವರು ಹೇಳಿದರು

ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಗುರುವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಅವರು ಮಾತನಾಡಿ, ರಾಮಾಯಣದಲ್ಲಿರುವ ಮೌಲ್ಯ, ತತ್ವಗಳು ಎಲ್ಲ ಕಾಲಕ್ಕೂ ಪ್ರಸ್ತುತ. ಸತತ ಪರಿಶ್ರಮದಿಂದ ಯಾವುದೇ ವ್ಯಕ್ತಿ ಮಹತ್ಸಾಧನೆ ಮಾಡಬಹುದು ಎನ್ನುವುದಕ್ಕೆ ವಾಲ್ಮೀಕಿ ಸಾಕ್ಷಿಯಾಗಿದ್ದಾರೆ ಎಂದರು.

ಅತ್ಯAತ ಹಿಂದುಳಿದ ವರ್ಗದ ವ್ಯಕ್ತಿ ಜ್ಞಾನ ಪಡೆಯುವ ಮೂಲಕ ಮಹರ್ಷಿಯಾದರು. ಹಿಂದುಳಿದ ವರ್ಗದ ಜನತೆ ತಮ್ಮಲ್ಲಿನ ಕೀಳರಿಮೆ ತೆuಟಿಜeಜಿiಟಿeಜರೆದು, ವಿದ್ಯಾಭ್ಯಾಸ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ  ಎಸ್. ಎಸ್.ಎಲ್.ಸಿ.,ಪಿ.ಯು.ಸಿ., ಪದವಿ ಹಾಗೂ ಪದವಿ ಪೂರ್ವ ಕಾಲೇಜು  ಅತಿ ಹೆಚ್ಚು ಅಂಕಗಳನ್ನು ಗಳಿಸಿ ವಿಧ್ಯಾರ್ಥಿಗಳ ಆತ್ಮೀಯ ಸನ್ಮಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ತಹಶಿಲ್ದಾರ್ ಮನೀಶಾ ಮಹೇಶ್ ಪತ್ರಿ,ಇಓ ರಮೇಶ್, ಬಿಇಓ ಎನ್.ವೆಂಕಟೇಶಪ್ಪ,ಕೃಷಿ ನಿರ್ದೇಶಕಿ ಲಕ್ಷ್ಮಿ, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಎನ್.ಶ್ರೀನಿವಾಸ್, ಪುರಸಭೆ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷೆ ಸುಜಾತ ನರಸಿಂಹ ನಾಯ್ಡು, ಗಡ್ಡಂ ರಮೇಶ್, ನರಸಪ್ಪ ವಾಲ್ಮೀಕಿ ಅಶ್ವಥಪ್ಪ, ಸಮಾಜ ಕಲ್ಯಾಣ ಇಲಾಖೆ ನಾಗರಾಜು, ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ: Chikkaballapur News: ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅನನ್ಯ:ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮ