Saturday, 14th December 2024

ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಪ್ರಜ್ವಲ್ ರೇವಣ್ಣ ಅರ್ಜಿ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.